ಅಂಪಾರು :ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

0
599

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ರಕ್ಷಾಬಂಧನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

Click Here

ಮಕ್ಕಳಿಗೆ ರಾಖಿ ತಯಾರಿಸುವ ಸ್ಪರ್ಧೆಯನ್ನು ಆಯೋಜಿಸಿ ನಂತರ ವಿದ್ಯಾರ್ಥಿಗಳು ಪರಸ್ಪರ ರಕ್ಷೆ ಕಟ್ಟುವುದು, ಆರತಿ ಮಾಡಿ ತಿಲಕ ಇಟ್ಟು, ಸಿಹಿ ವಿನಿಮಯ ಮಾಡಿಕೊಳ್ಳುವ ಮೂಲಕ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿದರು.

ಮುಖ್ಯೋಪಾಧ್ಯಾಯಿನಿ ಸರೋಜಾ ಮತ್ತು ಶಿಕ್ಷಕಿಯರು ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಇವರು ರಕ್ಷಾ ಬಂಧನದ ಅರ್ಥ, ಇದಕ್ಕೆ ಪೂರಕವಾದ ಪುರಾಣ ಕಥೆ ಹೇಳುವ ಮೂಲಕ ಸಹೋದರ ಸಹೋದರಿಯರ ಪವಿತ್ರ ಬಂಧನದ ಮಹತ್ವ ತಿಳಿಸಿದರು.

ಆಡಳಿತ ಮಂಡಳಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ, ಕಾರ್ಯದರ್ಶಿಯವರಾದ ಶಾನ್ಕಟ್ಟು ನವೀನ್ ಕುಮಾರ್ ಶೆಟ್ಟಿ ಹಾಗೂ ಎಲ್ಲಾ ನಿರ್ದೇಶಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

Click Here

LEAVE A REPLY

Please enter your comment!
Please enter your name here