ಕೋಟ :ನಕಲಿ ಐಟಿ ಅಧಿಕಾರಿಗಳಿಂದ ಮನೆಗೆ ನುಗ್ಗಿ ದರೋಡೆಗೆ ಯತ್ನ – ಇಬ್ಬರು ಆರೋಪಿಗಳ ಬಂಧನ

0
357

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಮಣೂರು ಬಸ್‌ ನಿಲ್ದಾಣದ ಎದುರಿನ ಕವಿತಾ ಎಂಬವರ ಮನೆ ದರೋಡೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಂತೋಷ್ ನಾಯಕ್(45) ಮತ್ತು ದೇವರಾಜ್ ಸುಂದರ್ ಮೆಂಡನ್(46) ಬಂಧಿತರು.

Click Here

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ನಕಲಿ ಐಟಿ ದಾಳಿ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ ನಡೆಸಲು ಮಹಾರಾಷ್ಟ್ರದಿಂದ ಬಂದಿದ್ದರು ಎಂದು ಗೊತ್ತಾಗಿದೆ. ಉಳಿದ ಆರೋಪಿಗಳಿಗಾಗಿ ಕೋಟ ಪೊಲೀಸರು ಬಲೆ ಬೀಸಿದ್ದಾರೆ.

ಸುಝುಕಿ ಸ್ವಿಫ್ಟ್ ಮತ್ತು ಇನೋವಾ ಕಾರಿನಲ್ಲಿ ಸುಮಾರು 6-8 ಜನರ ತಂಡ ಕವಿತಾ ಅವರ ಮನೆಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಬಾಗಿಲು ತೆರೆಯಲು ವಿಫಲ ಯತ್ನ ಮಾಡಿ ಗೇಟನ್ನು ಹಾನಿಗೊಳಿಸಿತ್ತು. ಬಳಿಕ ಕಾರಿನಲ್ಲಿ ಪರಾರಿಯಾಗಿತ್ತು.

Click Here

LEAVE A REPLY

Please enter your comment!
Please enter your name here