ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಶುಕ್ರವಾರ ನಡೆದ ಅಂಪಾರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅಂಪಾರಿನ ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ 4 ಪ್ರಥಮ ಸ್ಥಾನಗಳೊಂದಿಗೆ ಒಟ್ಟು 13 ಬಹುಮಾನಗಳನ್ನು ಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಇವರಿಗೆ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್.ನ ಅಧ್ಯಕ್ಷರು, ಕಾರ್ಯದರ್ಶಿ, ನಿರ್ದೇಶಕರು ,ಶಾಲಾ ಆಡಳಿತಾಧಿಕಾರಿ , ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.











