ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಮಹಿಳಾ ಮತ್ತು ಮಕ್ಕಳ ಶ್ರಯೋಭಿವೃದ್ದಿ ಸಮಿತಿ ಇವರ ಸಹಕಾರದಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಉಮೇಶ್ ಟಿ.ಎಲ್.ವಹಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಇಲಾಖೆಯ ಮೇಲ್ವಿಚಾರಕಿ ಲಲಿತಾ
ಪ್ರಭಾವತಿ ಶೆಟ್ಟಿ, ಶ್ರಯೋಭಿವೃದ್ದಿ ಸಮಿತಿಯ ಉಪಾಧ್ಯಕ್ಷೆ ಉಷಾ ಕೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರಯೋಭಿವೃದ್ದಿ ಸಮಿತಿಯ ಅಧ್ಯಕ್ಷೆ ಗುಣರತ್ನ್ ಇವರ ಸಂಪೂರ್ಣ ಸಹಕಾರದೊಂದಿಗೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರನ್ನು ಗೌರವಿಸಿ, ಶುಭಹಾರೈಸಿದರು.
ಪ್ರೇಮಾ ಸ್ವಾಗತಿಸಿದರು, ಉಷಾ ಕೆ.ಪ್ರಾಸ್ತಾವಿಕ ನುಡಿಗಳ್ನಾಡಿದರು. ನಾಗರತ್ನ್ ವಂದಿಸಿದರು. ವಿದ್ಯಾ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಸುಚಿತ್ರಾ ಪ್ರಾರ್ಥನೆಗೈದರು.











