ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಹಂಗಳೂರು ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಲಯನ್ ಹೆಚ್. ಬಾಲಕೃಷ್ಣ ಶೆಟ್ಟಿ ಮಾತನಾಡಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಯಾಗಿದ್ದು ಅವರನ್ನು ಗೌರವಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ದೀರ್ಘ ಕಾಲ ಸೇವೆ ಮಾಡಿ ನಿವೃತ್ತರಾದ ಶ್ಯಾಮಲ ಶೆಟ್ ಮತ್ತು ಐರಿನ್ ಡಿಸೋಜಾರವರನ್ನು ಗೌರವಪೂರ್ವಕವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲ ಶಿಕ್ಷಕ, ಶಿಕ್ಷಕಿಯರನ್ನು ಅಧ್ಯಕ್ಷರು ಅಭಿನಂದಿಸಿ ಗೌರವಿಸಿದರು. ವೇದಿಕೆಯಲ್ಲಿ ಲಯನ್ ಮ್ಯಾಥ್ಯೂ ಜೋಸೆಫ್ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ರೋವನ್ ಡಿ’ ಕೋಸ್ತ ಅವರ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಲಯನ್ ಪುನೀತ್ ಶೆಟ್ಟಿ ವಂದನಾರ್ಪಣೆ ಮಾಡಿದರು .ಲಯನ್ ಗ್ರೆಟ್ಟಾ ಡಿ’ ಕೋಸ್ತ್ ಕಾರ್ಯಕ್ರಮ ನಿರೂಪಿಸಿದರು.











