ಕುಂದಾಪುರ :ಸಮಾಜಕ್ಕೆ ಸತ್ಪ್ರಜೆಗಳನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು – ಶಾಸಕ ಕಿರಣ್ ಕುಮಾರ್ ಕೊಡ್ಗಿ

0
365

Click Here

Click Here

Video :

ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ (ಲಿಟ್ಲ್ ಸ್ಟಾರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಗುರುವಂದನಾ ಕಾರ್ಯಕ್ರಮ

ಕುಂದಾಪುರ ಮಿರರ್ ಸುದ್ದಿ…


ಕುಂದಾಪುರ :ಹೆತ್ತ ತಾಯಿ, ಹುಟ್ಟಿದ ಊರಿನ ನೆನಪು ಶಾಶ್ವತ ಇರುವಂತೆ ಜ್ಞಾನ ನೀಡಿದ ಗುರುವನ್ನು ಯಾವತ್ತೂ ಮರೆಯಲಾರರು. ಸಮಾಜಕ್ಕೆ ಸತ್ಪ್ರಜೆಗಳನ್ನು ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ತನ್ನಲ್ಲಿನ ಜ್ಞಾನವನ್ನು ವಿದ್ಯಾರ್ಥಿಗಳಿಗೆ ದಾರೆ ಎರೆಯುವ ಗುರುಗಳ ಸೇವೆ ಅಮೂಲ್ಯವಾದುದು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ (ಲಿಟ್ಲ್ ಸ್ಟಾರ್) ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ನಡೆದ ಗುರುವಂದನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

Click Here

ಶಿಕ್ಷಣದ ಗುಣಮಟ್ಟ ಹೆಚ್ಚಾದಾಗ ಆ ಸಂಸ್ಥೆಗೆ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಳವಾಗುತ್ತದೆ. ಗುಣಮಟ್ಟ ಕೊಡಲು, ವಿದ್ಯಾರ್ಥಿಗಳ, ಪೋಷಕರ ವಿಶ್ವಾಸ ಸಂಪಾದಿಸಲು ತುಂಬಾ ಪರಿಶ್ರಮ ಪಡಬೇಕಾಗುತ್ತದೆ. ಡಾ.ರಮೇಶ ಶೆಟ್ಟಿ ಅವರ ನೇತೃತ್ವದ ತಂಡ ಅದ್ಭುತ ಸಾಧನೆ ಮಾಡುತ್ತಿದೆ. ಶಿಕ್ಷಣದಲ್ಲಿ ಗುಣಮಟ್ಟವನ್ನು ಕೊಡುತ್ತ ಶಿಕ್ಷಣ ಸಂಸ್ಥೆಯನ್ನು ಉತ್ಕೃಷ್ಟವಾಗಿ ನಿರ್ಮಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಅವರು, ಗುರುವಂದನೆ ಕಾರ್ಯಕ್ರಮ ಶಾಲೆಯಲ್ಲಿ ನಡೆಸುವುದರಿಂದ ಹೆಚ್ಚು ಅರ್ಥಪೂರ್ಣ ಎನಿಸಿಕೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಗುರುಗಳ ಮಹತ್ವ, ಶಿಕ್ಷಕರ ದಿನಾಚರಣೆ ಮಹತ್ವ ತಿಳಿಸಲ್ಪಡುವ ಕಾರ್ಯಕ್ರಮ ಹೆಚ್ಚು ಪರಿಣಾಮಕಾರಿ ಎಂದರು.

ಈ ಸಂದರ್ಭದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿ ಶರಣ ಕುಮಾರ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಗುರುವಂದನೆ ಸ್ವೀಕರಿಸಿ ಮಾತನಾಡಿದ ಶರಣ ಕುಮಾರ್ ಅವರು, ಒಬ್ಬ ಶಿಕ್ಷಕರಿಗೆ ತನ್ನ ಶಿಷ್ಯರು ದೊಡ್ಡ ಸಾಧನೆಗಳನ್ನು ಮಾಡಿ ಶ್ರೇಷ್ಟ ಸ್ಥಾನಮಾನಗಳನ್ನು ಅಲಂಕರಿಸಿದಾಗ ಅವರಿಗೆ ಗೌರವ ಸಿಗುತ್ತದೆ. ನಮ್ಮ ದೇಶದಲ್ಲಿ ಶಿಕ್ಷಕರಿಗೆ ವಿಶೇಷವಾದ ಸ್ಥಾನವಿದೆ. ಶಾಲೆ ಸರಿಯಾಗಿದ್ದರೆ ಸಮಾಜ ಸರಿಯಾಗಿರುತ್ತದೆ.ಶಿಕ್ಷಕ ಸರಿಯಾಗಿದ್ದರೆ ಇಡೀ ಜನಾಂಗವೇ ಸರಿಯಾಗುತ್ತದೆ. ಹಾಗಾಗಿ ಶಿಕ್ಷಕರ ಮೇಲೆ ಮಹತ್ವದ ಜವಬ್ದಾರಿಯಿದೆ. ಸಮಾಜ ಇವತ್ತು ಶಿಕ್ಷಕರ ಮೇಲೆ ಅವಲಂಬಿತವಾಗಿದೆ. ಶಿಕ್ಷಕರು ಕರ್ತವ್ಯದಲ್ಲಿ ಚ್ಯುತಿ ಮಾಡಿದರೆ ಸಮಾಜದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಶಿಕ್ಷಕರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಸೇವೆ ಸಲ್ಲಿಸಬೇಕು. ನಿಸ್ವಾರ್ಥ ಮನೋಭಾವದಿಂದ ಕೆಲಸ ಮಾಡಿದಾಗ ವೃತ್ತಿಧರ್ಮಕ್ಕೆ ಗೌರವ ಬರುತ್ತದೆ ಹಾಗೂ ಸಾರ್ಥಕತೆ ಲಭಿಸುತ್ತದೆ ಎಂದರು.

ವಿಧಾನಪರಿಷತ್ ಮಾಜಿ ಸದಸ್ಯ ಗಣೇಶ್ ಕಾರ್ಣೀಕ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಮತ್ತು ಮುಖ್ಯ ಶಿಕ್ಷಕ ಪ್ರದೀಪ್ ಕೆ. ಉಪಸ್ಥಿತರಿದ್ದರು.

ಶಿಕ್ಷಕರಾದ ರಜತ್ ಭಟ್, ವಿನುತಾ, ಪ್ರದೀಪ್ ಕೆ. ರೇಣುಕಾ ಅವರನ್ನು ವಿಶೇಷವಾಗಿ ಗುರುತಿಸಿ ಅಭಿನಂದಿಸಲಾಯಿತು. ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತ ಶಿಕ್ಷಕರಿಗೆ ಬಹುಮಾನ ವಿತರಿಸಲಾಯಿತು.
ಸಂಸ್ಕೃತ ಅಧ್ಯಾಪಕ ರಜತ್ ಭಟ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ವಂದಿಸಿದರು.

Click Here

LEAVE A REPLY

Please enter your comment!
Please enter your name here