ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

0
314

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಂಜಯ ಗಾಂಧಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಸಂಜಯ ಗಾಂಧಿ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಅಂಪಾರು ಇಲ್ಲಿನ 15 ಶಿಕ್ಷಕಿಯರನ್ನು ಗೌರವಿಸಲಾಯಿತು.

ಶಿಕ್ಷಕಿಯರಿಗೆ ವಿಶೇಷ ಭೋಜನ ವ್ಯವಸ್ಥೆ, ಆಟೋಟ ಸ್ಪರ್ಧೆಗಳನ್ನು, ಹಾಗೂ ನೆನಪಿನ ಕಾಣಿಕೆ ನೀಡುವುದರೊಂದಿಗೆ ಶಿಕ್ಷಕರ ದಿನದ ಆಚರಣೆಗೆ ಕಳೆ ಕಟ್ಟಿತ್ತು.

ವೇದಿಕೆಯ ಸಮಾರಂಭದಲ್ಲಿ ಸಂಜಯಗಾಂಧಿ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಇವರು ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಸಾಧಿಸುತ್ತಿದ್ದು, ಮಕ್ಕಳ ಸರ್ವತೋಮುಖ ಬೆಳವಣಿಗೆ ಆಗುತ್ತಿದೆ ಎಂದರು ಮತ್ತು ಇದಕ್ಕಾಗಿ ಶ್ರಮಿಸುತ್ತಿರುವ ಎಲ್ಲಾ ನಿಸ್ವಾರ್ಥ ಶಿಕ್ಷಕಿಯರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಮುಂದೆಯೂ ಉತ್ತಮ ಸೇವೆ ಮಾಡಲು ಪ್ರೋತ್ಸಾಹಿಸಿದರು.

Click Here

ನಿರ್ದೇಶಕರಾದ ಉಮೇಶ್ ಕೊಠಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯದರ್ಶಿಯವರಾದ ಶಾನ್ಕಟ್ಟು ನವೀನ್ ಕುಮಾರ್ ಶೆಟ್ಟಿ ಇವರು ಶಾಲೆಯ ಅಭಿವೃದ್ಧಿ ತ್ವರಿತ ಗತಿಯಲ್ಲಿ ಆಗುತ್ತಿದ್ದು ಕೆಲವೇ ವರ್ಷಗಳಲ್ಲಿ ಇದು ಬಹು ದೊಡ್ಡ, ಮಾದರಿ ವಿದ್ಯಾಸಂಸ್ಥೆಯಾಗಿ ಬೆಳೆಯಲಿದೆ ಎಂದು ಅಭಿಪ್ರಾಯಪಟ್ಟರು. ಇದಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರ ತಂಡವನ್ನು ಶ್ಲಾಘಿಸಿದರು.

ಟ್ರಸ್ಟ್‌ ನ ಖಜಾಂಚಿ ಸುಭಾಶ್ಚಂದ್ರ ಶೆಟ್ಟಿ ಕೊಡ್ಲಾಡಿ ಇವರು ಶಿಕ್ಷಕರು ದಿನದ ಶುಭಾಶಯಗಳನ್ನು ತಿಳಿಸುತ್ತಾ ಮಕ್ಕಳ ಭವಿಷ್ಯ‌ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮತ್ತು ಭಾರತದ ಹೆಮ್ಮೆಯ ಪ್ರತಿಷ್ಠಿತ ವಿಶ್ವವಿದ್ಯಾಲಯದ ಹುಟ್ಟಿನ ಕಥೆಯನ್ನು, ಅದರ ಹಿಂದೆ ಒಬ್ಬ ಶಿಕ್ಷಕನಿಗೆ ವಿದ್ಯಾಸಂಸ್ಥೆಯ ಬಗೆಗೆ ಇರಬೇಕಾದ ತುಡಿತ ನನ್ನು ಉತ್ತಮವಾಗಿ ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ಚೈತ್ರ ಯಡಿಯಾಳ ಇವರು ತಮ್ಮ ತಂಡದ ಸಮರ್ಪಣಾ ಭಾವ, ಉತ್ತಮ ಕಾರ್ಯ ವೈಖರಿಯನ್ನು ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯ ಶಿಕ್ಷಕಿ ಸರೋಜಾ ಇವರು ಎಲ್ಲಾ ಶಿಕ್ಷಕಿಯರಿಗೆ ಶುಭಾಶಯಗಳನ್ನು ಕೋರಿದರು.

ನಿರ್ದೇಶಕರಾದ ಅರುಣ್ ಕುಮಾರ್ ಶೆಟ್ಟಿ, ಅಶೋಕ್ ಅಂಪಾರು, ಇವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿ, ಶಿಕ್ಷಕಿಯರಿಗೆ ನೆನಪಿನ ಕಾಣಿಕೆ ನೀಡಿದರು.

Click Here

LEAVE A REPLY

Please enter your comment!
Please enter your name here