ಕುಂದಾಪುರ ಮಿರರ್ ಸುದ್ದಿ…
ಕೋಟ: ಸಹಕಾರಿ ಹಾಲು ಉತ್ಪಾದಕ ಸಂಘ ಕೋಟತಟ್ಟು ಬಾರಿಕೆರೆ ಇದರ ವಾರ್ಷಿಕ ಸಾಮಾನ್ಯ ಸಭೆ ಕಾರಂತ ಥೀಂ ಪಾರ್ಕನಲ್ಲಿ ಮಂಗಳವಾರ ನಡೆಯಿತು.
ಸಭೆಯಲ್ಲಿ ಪ್ರಗತಿಪರ ಕೃಷಿಕ ಆನಂದ್ ಪೂಜಾರಿ ಹಾಗೂ ಪ್ರಭಾಕರ ಕಾಂಚನ್ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಂಘಕ್ಕೆ ಅತಿ ಹೆಚ್ಚು ಹಾಲು ನೀಡಿದ ಸರೋಜ ಶಿವಾನಂದ , ಸುರೇಶ್ ಬಾಯರಿ,ಆನಂದ್ ಪೂಜಾರಿ ಇವರುಗಳಿಗೆ ಬಹುಮಾನ ವಿತರಿಸಲಾಯಿತು.ಸಂಘದ ಅಧ್ಯಕ್ಷ ವ್ಯಯಕ್ತಿ ನೆಲೆಯಲ್ಲಿ ಹಾಲು ಉತ್ಪಾದಕ ಸದಸ್ಯರ ಸಾಧಕ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಕಾಂಚನ್ ವಹಿಸಿದ್ದರು.
ಕೆ.ಎಂ.ಎಫ್ ವಿಸ್ತೀರ್ಣಾಧಿಕಾರಿ ಸರಸ್ವತಿ ಹೈನುಗಾರಿಕೆ ಕುರಿತು ಮಾಹಿತಿ ನೀಡಿದರು.ವಾರ್ಷಿಕ ವರದಿಯನ್ನು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಂದರ್ ವಾಚಿಸಿದರು.
ಅತಿಥಿಗಳಾಗಿ ಕೋಟ ಸಹಕಾರಿ ವ್ಯವಸಾಯಕ ಸಂಘದ ನಿರ್ದೇಶಕ ರಂಜೀತ್ ಕುಮಾರ್ ಹಾಗೂ ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು











