ಕುಂದಾಪುರ: ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

0
199

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕಂದಾಯ ಇಲಾಖೆಯಿಂದ ನಿರಂತರವಾಗಿ ಸರ್ಕಾರದಿಂದ ಅಭಿವೃದ್ದಿಪಡಿಸಿರುವ ಹಕ್ಕುಪತ್ರ, ಆಧಾರ್ ಸೀಡ್, ಬೆಳೆ ಕಟಾವು ಮೊಬೈಲ್ ಆಪ್, ಭೂಮಿ, ದಿಶಾಂಕ್ ಸೇರಿದಂತೆ ಸುಮಾರು 21 ಎಲ್ಲಾ ವೆಬ್/ಮೊಬೈಲ್ ತಂತ್ರಾಂಶಗಳ ಮೂಲಕ ಹಾಗೂ ಸಿ-ವೃಂದದ ನೌಕರರ ಹತ್ತು ಪಟ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳ ವೇತನ ಶ್ರೇಣಿ ನೀಡಬೇಕು. ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಸೇವಾ ವಿಷಯಗಳಿಗೆ ಸಂಬಂಧಿಸಿ ಸೌಲಭ್ಯಗಳನ್ನು ಕಲ್ಪಿಸಬೇಕು, ತಂತ್ರಾಂಶಗಳಿಗೆ ಸಂಬಂಧಿಸಿದ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯಬೇಕು, ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮೆಮೋ ಹಾಕಬಾರದು, ಸೇರಿದಂತೆ ಹಲವಾರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ನೀಡಿದ ಕರೆಯಂತೆ ಕುಂದಾಪುರ ಘಟಕದ ಗ್ರಾಮ ಆಡಳಿತ ಅಧಿಕಾರಿಗಳು ಗುರುವಾರ ಕುಂದಾಪುರ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

Click Here

ಈ ಸಂದರ್ಭ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರೀ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಮಾತನಾಡಿ, ಒಂದು ಕಡೆ ಅಧಿಕಾರಿಗಳ ಕೊರತೆ, ಇನ್ನೊಂದು ಕಡೆ ಮೂಲಭೂತ ಸೌಲಭ್ಯಗಳ ಕೊರತೆ, ಮತ್ತೊಂದು ಕಡೆ ರಜಾ ದಿನಗಳಲ್ಲಿಯೂ ಕೆಲಸದ ಒತ್ತಡದಿಂದ ಗ್ರಾಮ ಆಡಳಿತ ಅಧಿಕಾರಿಗಳು ಬಸವಳಿದಿದ್ದಾರೆ. ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಗೆ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಕಾರ್ಯಕರ್ತ ಕೋಡಿ ಅಶೋಕ ಪೂಜಾರಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಜನರ ಸಮೀಪದ ಅಧಿಕಾರಿಗಳಾಗಿ ಗ್ರಾಮ ಆಡಳಿತ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ಒಬ್ಬೊಬ್ಬರಿಗೆ ನಾಲ್ಕೈದು ಗ್ರಾಮಗಳನ್ನು ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಗಳುಂಟಾಗುತ್ತಿವೆ. ಇದನ್ನು ತಪ್ಪಿಸಲು ಅವರ ಬೇಡಿಕೆಗಳನ್ನು ತಲ್ಷಣ ಪೂರೈಸಬೇಕು ಎಂದು ಆಗ್ರಹಿಸಿದರು.

ನಿವೃತ್ತ ನೌಕರರ ಜಿಲ್ಲಾದ್ಯಕ್ಷರಾದ ಪ್ರಕಾಶ್ ಚಂದ್ರಶೆಟ್ಟಿ, ಗ್ರಾಮ ಆಡಳಿತ ಅಧಿಕಾರಿ ಸಂಘದ ತಾಲೂಕು ಅದ್ಯಕ್ಷ ಶಿವರಾಯ, ಪ್ರಧಾನ ಕಾರ್ಯದರ್ಶಿ ವಿಘ್ನೇಶ್ ಉಪಾಧ್ಯ, ಉಪಾದ್ಯಕ್ಷ ಆನಂದಕುಮಾರ ಒ. ಖಜಾಂಚಿ ಸೋಮಪ್ಪ ಹೆಬ್ಬಾಳ. ರಾಜ್ಯ ಪರಿಷತ್ ಸದಸ್ಯ ಆನಂದ್ ಮುಕ್ಕಣ್ಣ , ಮಹಿಳಾ ಕಾರ್ಯದರ್ಶಿ ಹೇಮಾ ಹಾಗೂ ಹಾಗೂ ಕುಂದಾಪುರ ತಾಲೂಕಿನ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಸರ್ಕಾರಿ ಕಂದಾಯ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಬಾಹ್ಯ ಬೆಂಬಲ ನೀಡಿದರು. ಪ್ರತಿಭಟನೆ ಸಂಜೆಯವರೆಗೂ ನಡೆಯಲಿದೆ.

Click Here

LEAVE A REPLY

Please enter your comment!
Please enter your name here