ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ : ಸೆಪ್ಟೆಂಬರ್ 25 ರಂದು ಉಡುಪಿ ಅಜ್ಜರಕಾಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನನ್ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಹಾಗೂ ಮತ್ತು ಈಜು ಸ್ಪರ್ಧೆಯಲ್ಲಿ ರೋಹಿತ್ 2 ಬೆಳ್ಳಿ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.











