ಕುಂದಾಪುರ: ಬೈಕ್ ಬುಲೆಟ್ ಮುಖಾಮುಖಿ ಡಿಕ್ಕಿ – ಒಬ್ಬ ಸಾವು , ಮಹಿಳೆ ಸೇರಿದಂತೆ ಇಬ್ಬರು ಗಂಭೀರ

0
567

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸರ್ವಿಸ್ ರಸ್ತೆಯಲ್ಲಿ ಬೈಕುಗಳೆರಡು ಮುಖಾಮುಖಿ ಡಿಕ್ಕಿ ಆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್‌ ಎದುರುಗಡೆಯ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ತು ನಿವಾಸಿಯಾದ ಪೈಂಟರ್ ವೆಂಕಟೇಶ್ ಎಂಬುವರ ಪುತ್ರ ಖಾಸಗಿ ಕಂಪನಿಯೊಂದರ ಉದ್ಯೋಗಿ ಶಶಾಂಕ್‌ ಮೊಗವೀರ (22ವರ್ಷ) ಮೃತಪಟ್ಟ ಬೈಕ್ ಸವಾರ.

Click Here

ಶಶಾಂಕ್ ಮೊಗವೀರ ರಾತ್ರಿ 11.00 ರ ವೇಳೆಗೆ ಹಂಗಳೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತಕ್ಷಣ ಅವರನ್ನು ಮಣಿಪಾಲದ ಕೆಏಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು ಆದರೆ ಅಲ್ಲಿ ವೈದ್ಯರು ಶಶಾಂಕ್ ಮರಣ ಹೊಂದಿರುವುದನ್ನು ದೃಢಪಡಿಸಿದ್ದಾರೆ.

ಬಲೆಟ್ ಸವಾರ ಮತ್ತು ಹಿಂದೆ ಕುಳಿತಿದ್ದ ಮಹಿಳೆಯೂ ಗಂಭೀರ ಗಾಯಗೊಂಡಿದ್ದು ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here