ಬೈಂದೂರು :ಸಾರ್ವಜನಿಕ ಉದ್ಯಮಗಳ ಸಮಿತಿ ಮತ್ತು ಗೃಹ ವ್ಯವಹಾರಗಳ ಸಂಸದೀಯ ಸಮಿತಿಗೆ ಸಂಸದ ಬಿ. ವೈ ರಾಘವೇಂದ್ರ ನೇಮಕ

0
497

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶಿವಮೊಗ್ಗ ಲೋಕಸಭಾ ಸಂಸದರಾದ ಬಿ ವೈ ರಾಘವೇಂದ್ರ ಇವರನ್ನು ಕೇಂದ್ರ ಸರ್ಕಾರವು ಎರಡು ಪ್ರಮುಖ ಸಂಸದೀಯ ಸಂಸ್ಥೆಗಳಿಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿಗೆ ಮತ್ತು ಗೃಹ ವ್ಯವಹಾರಗಳ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ (DRSC) ನೇಮಕಗೊಳಿಸಿ ಆದೇಶ ಹೊರಡಿಸಿದೆ. ಈ ನೇಮಕಾತಿಗಳು ರಾಷ್ಟ್ರೀಯ ನೀತಿ ರಚನೆಯಲ್ಲಿ ಅವರಿಗೆ ಮಹತ್ವದ ಹೊಣೆ ವಹಿಸಲಾಗಿದೆ.

Click Here

ಸಾರ್ವಜನಿಕ ಉದ್ಯಮಗಳ ಸಮಿತಿಯು ಸರ್ಕಾರಿ ಸ್ವಾಮ್ಯದ ಉದ್ಯಮಗಳ ನಿರ್ವಹಣೆ ಮತ್ತು ಕಾರ್ಯಕ್ಷಮತೆಯನ್ನು ಪರಿಶೀಲಿಸುತ್ತದೆ. ಗೃಹ ವ್ಯವಹಾರಗಳ ಸ್ಥಾಯಿ ಸಮಿತಿಯು ಆಂತರಿಕ ಭದ್ರತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸುತ್ತದೆ.

ಈ ನೇಮಕ ಕುರಿತು ಸಂಸದರಾದ ಬಿ.ವೈ ರಾಘವೇಂದ್ರರವರು ಸಂಸತ ವ್ಯಕ್ತ ಪಡಿಸಿದ್ದು, ನರೇಂದ್ರ ಮೋದೀಜಿಯವರಿಗೆ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾರಿವರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುತ್ತಾರೆ.

Click Here

LEAVE A REPLY

Please enter your comment!
Please enter your name here