ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯಿಂದ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರಧಾನ ಗುರುವಂದನಾ ಕಾರ್ಯಕ್ರಮ

0
422

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಗುಣಮಟ್ಟದ ಶಿಕ್ಷಣದೊಂದಿಗೆ ಸರಕಾರಿ ಶಾಲೆಗಳು ಉನ್ನತ ಮಟ್ಟ ಕಾಯ್ದುಕೊಳ್ಳಬೇಕು ಆ ಮೂಲಕ ಸರಕಾರಿ ಶಾಲೆಗಳ ಉಳಿವಿಗೆ ಪ್ರಯತ್ನಿಸಬೇಕು ಎಂದು ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಅಭಿಪ್ರಾಯಪಟ್ಟರು.

ಭಾನುವಾರ ಕುಂಭಾಶಿಯ ಆನೆಗುಡ್ಡೆಯ ಶ್ರೀ ವಿನಾಯಕ ಸಭಾಗೃಹದಲ್ಲಿ ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲೆ ಇವರ ನೇತೃತ್ವದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ಕುಂದಾಪುರ,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ವಕೀಲರ ಸಂಘ, ಬಾರ್ ಅಸೋಸಿಯೇಶನ್ ಕುಂದಾಪುರ, ಗೀತಾ ಹೆಚ್. ಎಸ್. ಎನ್ ಫೌಂಡೇಶನ್ ಕೋಟೇಶ್ವರ, ಶ್ರೀ ಸಿದ್ಧಿವಿನಾಯಕ ದೇವಸ್ಥಾನ, ಆನೆಗುಡ್ಡೆ ಶ್ರೀ ವಿನಾಯಕ ಸಭಾಗೃಹ, ಕುಂಭಾಶಿ, ಮಗು ಮತ್ತು ಕಾನೂನು ಕೇಂದ್ರ, ನ್ಯಾಶನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿರ್ವಸಿಟಿ ಬೆಂಗಳೂರು ಶಿಕ್ಷಕರ ದಿನಾಚರಣೆಯ ಪ್ರಯುಕ್ತ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿ ಪ್ರಧಾನ ಗುರುವಂದನಾ ಕಾರ್ಯಕ್ರಮ ಹಾಗೂ ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಅತ್ಯುತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ ಪ್ರಧಾನ ಸಮಾರಂಭ, ಮಕ್ಕಳ ಹಕ್ಕುಗಳ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾದದ್ದು ನಾನು ಕೂಡಾ ಶಿಕ್ಷಕನಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ,ಸಾಮಾಜಿಕ ವ್ಯವಸ್ಥೆಯಲ್ಲಿ ಶಿಕ್ಷಕರ ಜವಾಬ್ದಾರಿ ಅವರ ಕಾರ್ಯನಿರ್ವಹಣೆ ಶ್ರೇಷ್ಠವಾದದ್ದು ಈ ದಿಸೆಯಲ್ಲಿ ಶಿಕ್ಷಕರ ದಿನಾಚರಣೆಯ ಮೂಲಕ ಗುರುಗಳ ಮಹತ್ವವನ್ನು ಅರಿಯುವ ಕೆಲಸ ಪ್ರತಿಯೊಬ್ಬರಲ್ಲೂ ಆಗಬೇಕಿದೆ, ಬೇರೆ ರಾಷ್ಟ್ರಗಳಿಗೆ ಹೊಲಿಸಿದರೆ ನಮ್ಮ ದೇಶ ಗುರು ಪರಂಪರೆ ಹೆಚ್ಚಿನ ಆದ್ಯತೆ ನೀಡುತ್ತದೆ,ಆಗಿನ ಶಿಕ್ಷಣ ಕ್ ಮೌಲ್ಯಾಧಾರಿತ ಶಿಕ್ಷಣ ನಮ್ಮಗೆ ದೊರಕಿದೆ ಆದರೆ ಪ್ರಸ್ತುತ ಶಿಕ್ಷಣ ವ್ಯವಸ್ಥೆ,ಗುರು ಹಿರಿಯರ ತಿಳಿ ಹೇಳುವ ಕಾರ್ಯದಲ್ಲಿ ವ್ಯತ್ಯಾಸಗಳಾಗಿವೆ ಇದರಿಂದ ಯುವ ಸಮುದಾಯ ದಿಕ್ಕು ಬದಲಾಗಿದೆ, ಮೊಬೈಲ್ ತಂತ್ರಜ್ಞಾನದ ಕಾಲಘಟ್ಟದಲ್ಲಿ ಯುವಕರ ದಾರಿ ತಪ್ಪುತ್ತಿದೆ ಅದರ ಸದ್ಭಳಕೆ ಬಿಟ್ಟು ದುರ್ಬಳಕೆ ಹೆಚ್ಚಾಗುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿ ಕಿವಿಮಾತು ಹೇಳಿ ಈ ಬಗ್ಗೆ ಪೋಷಕರು ಜಾಗೃತಿ ವಹಿಸುವ ಅಗತ್ಯತೆಯನ್ನು ಒತ್ತಿಹೇಳಿದರು.ಶಿಕ್ಷಣದ ಜತಗೆ ಮಾನಸಿಕ,ದೈಹಿಕ ಕ್ಷಮತೆ ಕಾಪಾಡಿಕೊಳ್ಳುವ ವಿಚಾರವನ್ನು ಸಭೆಯಲ್ಲಿ ಮನದಟ್ಟು ಮಾಡಿದರು.

ಈ ಸಂದರ್ಭದಲ್ಲಿ ಕಾರ್ಕಳದ ನಿವೃತ್ತ ಮುಖ್ಯ ಶಿಕ್ಷಕಿ ಸುಮನಾ ಕಲ್ಯಾ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.

Click Here

ಜಿಲ್ಲಾ ಮಟ್ಟದ ಸರಕಾರಿ ಶಾಲೆಗಳ ಅಭಿವೃದ್ಧಿ ಹರಿಕಾರ ಪ್ರಶಸ್ತಿಯನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ರವರಿಗೆ ನೀಡಲಾಯಿತು.

ಇದೇ ವೇಳೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರನ್ನು ಗುರುತಿಸಿಗೌರವಿಸಲಾಯಿತು.ಜತಗೆ ಕುಂಭಾಶಿ,ವಳಕಾಡು, ಗುಜ್ಜಾಡಿ, ನಲ್ಲೂರು,ಗಂಟುಬೀಳು,ಹಂಗಾರಕಟ್ಟೆ ಶಾಲೆಗಳ ಸಮಿತಿಯನ್ನು ಜಿಲ್ಲಾ ಮಟ್ಟದ ಅತ್ಯುತ್ತಮ ಶಾಲಾಭಿವೃದ್ಧಿ ಸಮಿತಿ ಹಾಗೂ ಒರ್ವ ಎಸ್‍ಡಿಎಂಸಿ ಅಧ್ಯಕ್ಷರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಶಾಲಾ ಎಸ್‍ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವನೆ ಸಲ್ಲಿಸಿದರು.

ಮುಖ್ಯ ಅಭ್ಯಾಗತರಾಗಿ ಕುಂದಾಪುರ ಕೋಟ್9ನ ಹಿರಿಯ ಸಿವಿಲ್ ನ್ಯಾಯಾಧೀಶ ರಾಜು ಎನ್,ಜಿಲ್ಲಾ ಕಾನೂನು ಪ್ರಾಧಿಕಾರದ ಹಿರಿಯ ನ್ಯಾಯಾಧೀಶ ಎಂ. ಪುರುಷೋತ್ತಮ, ಗೀತಾ ಎಚ್.ಎಸ್.ಎನ್ ಫೌಂಡೇಶನ್ ಕೋಟೇಶ್ವರ ಇದರ ಅಧ್ಯಕ್ಷ ಶಂಕರ್ ಐತಾಳ್,ಮಂಗಳೂರಿನ ಪಡಿ ನಿರ್ದೇಶಕ ರೆನ್ನಿ ಡಿಸೋಜ,ಶ್ರೀ ವಿನಾಯಕ ಸಭಾಗೃಹದ ಮುಖ್ಯಸ್ಥ ರವಿರಾಜ ಉಪಾಧ್ಯಾಯ,ಶಾಲಾ ಎಸ್‍ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ಉಡುಪಿ ಗೌರವ ಸಲಹೆಗಾರೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ,ಎಸ್ ಡಿಎಂಸಿಸಿಸಿಎಫ್ ಮಂಗಳೂರು ಇದರ ರಾಜ್ಯ ಸಂಚಾಲಕ ಮೋಯಿದ್ದಿನ್ ಕುಟ್ಟಿ ಉಪಸ್ಥಿತರಿದ್ದರು.

ತಾಲೂಕು ಘಟಕದ ಅಧ್ಯಕ್ಷ ಎಸ್ ವಿ ನಾಗರಾಜ್ ಸ್ವಾಗತಿಸಿದರು, ಉಪಾಧ್ಯಕ್ಷ ಉಪಾಧ್ಯಕ್ಷ ಉಷಾ ರಮೇಶ್ ವಂದಿಸಿದರು. ಉಪಾಧ್ಯಕ್ಷ ರಾಜಶೇಖರ್ ಹಾಗೂ ಸಂಘಟನಾ ಕಾರ್ಯದರ್ಶಿ ಶೋಭಾ ಶಾಂತರಾಜ್ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here