ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಪಂಚಾಯಿತಿ ಉಡುಪಿ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಹ್ಯಾಂಡ್ ಬಾಲ್ ನಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೆ. ಶ್ರೀನಿತಾ ಎಸ್.ಕಾಮತ್ ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.











