ಕೋಟೇಶ್ವರ: ನಡೆದು ಸಾಗುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ : ಬಿಎಸ್ಸಿ ವಿದ್ಯಾರ್ಥಿ ಸಾವು

0
954

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ಫುಟ್ಪಾತಿನ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಎಂಬಲ್ಲಿ ಮಂಗಳವಾರ (ಇಂದು) ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯನ್ನು ನಾಗೂರು ನಿವಾಸಿ ಪ್ರಸ್ತುತ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಧನುಷ್ ಎಂದು ಗುರುತಿಸಲಾಗಿದೆ.

Click Here

ಧನುಷ್ ತನ್ನ ಇಬ್ಬರು ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರದತ್ತ ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ. ಅತೀ ವೇಗವಾಗಿ ಹಿಂದಿನಿಂದ ಬಂದ ಶ್ರೀ ಮಹಾಗಣಪತಿ ಪ್ರಸನ್ನ ಎಂಬ ಹೆಸರಿನ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ತೀರಾ ಬಲಬದಿಗೆ ಬಂದು ಧನುಷ್ ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಕುಂದಾಪುರ ಸಂಚಾರೀ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here