ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

0
364

Click Here

Click Here

ಕುಂದಾಪುರ ಮಿರರ್ ಸುದ್ದಿ…
ಉಡುಪಿ:
ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಇಂದು ಉಡುಪಿ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದೊಂದಿಗೆ ನಡೆದ ,ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ಯುವ ಜನತೆ ಇತ್ತೀಚೆಗೆ ನಡೆದ ಫಿಟ್ ಇಂಡಿಯಾ,ಕ್ಲೀನ್ ಇಂಡಿಯಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಪೂರ್ಣ ಯಶಸ್ಸಿಗೆ ಉತ್ತಮ ಸಹಕಾರ ನೀಡಿದ್ದು, ಜಿಲ್ಲಾಡಳಿತ ಕೂಡಾ ಯುವಜನತೆ ನೀಡುವ ಸಲಹೆಗಳನ್ನು ಪರಿಗಣಿಸುತ್ತಿದ್ದು, ಯುವ ಜನತೆಯ ಕೋರಿಕೆ ಮೇರೆಗೆ ಇತ್ತೀಚೆಗೆ ಐ.ಎ.ಎಸ್. ಕೆ.ಎ.ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಮಾಹಿತಿ ಮತ್ತು ತರಬೇತಿಯನ್ನು ಏರ್ಪಡಿಸಲಾಗಿದೆ. ಸ್ವಚ್ಚತೆ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳ ಆವರಣ ಗೋಡೆಗಳ ಮೇಲೆ ಉತ್ತಮ ಸಂದೇಶ ಸಾರುವ ಆಕರ್ಷಕ ಚಿತ್ರಣ ಮತ್ತು ಸಂದೇಶಗಳನ್ನು ರಚಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್, ಪ್ರತಿಯೊಂದು ಕ್ಷೇತ್ರದಲ್ಲೂ ಸಹ ಯುವ ಜನತೆ ತಮ್ಮಲ್ಲಿರುವ ಯುವಶಕ್ತಿ ಮತ್ತು ಪ್ರತಿಭೆಯನ್ನು ಸದ್ಬಳಕೆ ಮಾಡಬೇಕು ಎಂದರು.

ಜಿಲ್ಲೆಯಲ್ಲಿ ಸಂಪೂರ್ಣ 2 ಡೋಸ್ ಕೋವಿಡ್ ಲಸಿಕೆ ನೀಡುವ ಕಾರ್ಯ ಪ್ರಗತಿಯಲ್ಲಿದ್ದು,ಈಗಾಗಲೇ 93% ಪ್ರಥಮ ಡೋಸ್ ಮತ್ತು 68% ಎರಡನೇ ಡೋಸ್ ಸಾಧನೆ ಆಗಿದ್ದು,100% ಎರಡೂ ಡೋಸ್ ಲಸಿಕೆ ಸಾಧನೆ ಆಗುವ ನಿಟ್ಟಿನಲ್ಲಿ ಯುವ ಜನತೆ ಸಹಕಾರ ಅಗತ್ಯವಾಗಿದ್ದು, ಯುವಜನತೆ ತಮ್ಮ ಮನೆಗಳಲ್ಲಿ ಮತ್ತು ಸಮೀಪದ ಮನೆಗಳಲ್ಲಿ ಕೋವಿಡ್ ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವ ಕುರಿತಂತೆ ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವಂತೆ ಪ್ರೇರೆಪಿಸಬೇಕು ಆ ಮೂಲಕ ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಯುವ ಜನತೆಯಲ್ಲಿನ ವ್ಯಕ್ತಿತ್ವ ಮತ್ತು ಕಲೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಇದರಿಂದ ಯುವ ಜನತೆಯ ವ್ಯಕ್ತಿತ್ವ ವಿಕಸನ ಕೂಡಾ ಆಗಲಿದೆ. ದೇಶದಲ್ಲಿ ಯುವ ಸಂಪತ್ತು ಅತ್ಯಧಿಕವಾಗಿದ್ದು ಇದರ ಸದ್ಬಳಕೆ ಆಗಬೇಕು, ಯುವಕರು ಎಲ್ಲಾ ಕಾರ್ಯಕ್ರಮಗಳ ರಾಯಭಾರಿಗಳಾಗಬೇಕು, ಹೆಚ್ಚಿನ ಸಂಖ್ಯೆಯಲ್ಲಿ ಅತ್ಯುತ್ತಮ ನಾಯಕರು ಯುವ ಸಮುದಾಯದಿಂದ ಮೂಡಿಬರಬೇಕು ಎಂದರು.

Click Here

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಾಣಿ ಬಲ್ಲಾಳ್,ಎನ್.ಎಸ್.ಎಸ್. ಸಂಯೋಜನಾಧಿಕಾರಿ ಡಾ.ರಾಜೆಂದ್ರ ಉಪಸ್ಥಿತರಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ತ್ರಿವೇಣಿ ನಿರೂಪಿಸಿದರು.

ಯುವಜನೋತ್ಸವದಲ್ಲಿ,ಜಾನಪದ ನೃತ್ಯ,ಜಾನಪದ ಹಾಡು, ಏಕಪಾತ್ರಾ ಅಭಿನಯ,ಶಾಸ್ತ್ರೀಯ ಸಂಗೀತ, ,ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ವಾದ್ಯ,ಹಾರ್ಮೋನಿಯಂ, ಗಿಟಾರ್, ಆಶು ಭಾಷಣ ಮುಂತಾದ ಸ್ಪರ್ಧೆಗಳನ್ನು 3 ವಿವಿಧ ವೇದಿಕೆಗಳಲ್ಲಿ ಏರ್ಪಡಿಸಲಾಗಿತ್ತು.

Click Here

LEAVE A REPLY

Please enter your comment!
Please enter your name here