ಕೊಲ್ಲೂರು :ಶ್ರೀ ಮೂಕಾಂಬಿಕೆ ದೇಗುಲ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಬಾಬು ಹೆಗ್ಡೆ ಆಯ್ಕೆ

0
547

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೊಲ್ಲೂರು, ಅ.4: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುಕ್ರವಾರ ದೇವಸ್ಥಾನದಲ್ಲಿ ನಡೆಯಿತು.

Click Here

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.

ಕಳೆದ ಒಂದು ವರ್ಷದಿಂದ ಆಡಳಿತ ಸಮಿತಿ ನೇಮಕವಾಗದೆ ಅತಂತ್ರವಾಗಿತ್ತು. ಕೊನೆಗೂ ವ್ಯವಸ್ಥಾಪನಾ ಸಮಿತಿ ರಚನೆಗೊಂಡಿತ್ತು. ಇದಕ್ಕೂ ಸಾಕಷ್ಟು ಅಪಸ್ವರಗಳು ಕೇಳಿ ಬಂದಿದ್ದವು.

Click Here

LEAVE A REPLY

Please enter your comment!
Please enter your name here