ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಸ್ತಿ ಪಂದ್ಯಾಟದಲ್ಲಿ ಚಿನ್ನದ ಪದಕ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಾಶುಂಪಾಲ ಗಣೇಶ್ ಮೊಗವೀರ ಅವರು ಸನ್ಮಾನಿಸಿ, ಗೌರವಿಸಿದರು.
ಬಳಿಕ ಮಾತನಾಡಿದ ಅವರು, ಪೋಷಕರು ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ, ಸ್ಫೂರ್ತಿ ನೀಡಿದಾಗ ಹೆಚ್ಚು ಹೆಚ್ಚು ಪ್ರತಿಭೆಗಳು ಹೊರಬರಲು ಸಾಧ್ಯ. ಈ ನಿಟ್ಟಿನಲ್ಲಿ ನಮ್ಮ ವಿದ್ಯಾ ಸಂಸ್ಥೆಯಿಂದ ಈರ್ವರಿಗೆ ತರಭೇತಿ ಪಡೆಯಲು ಸಂಪೂರ್ಣ ಸಹಕಾರ ನೀಡಿದ್ದೇವೆ ಎಂದರು. ಶಿಕ್ಷಣ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ನಮ್ಮ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತದೆ. ಈ ಮೂಲಕ ಜೀವನದಲ್ಲಿ ಗುರಿಯನ್ನು ಸಾಧಿಸಲು ಸಹಕಾರವಾಗುತ್ತದೆ ಎಂದರು.
ಬಾಲಕಿಯರ 70 ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿನಿ ಗಾಯತ್ರಿ ಚಿನ್ನದ ಪದಕ ಹಾಗೂ ಬಾಲಕರ 97+ಕೆ.ಜಿ.ವಿಭಾಗದಲ್ಲಿ ವಿದ್ಯಾರ್ಥಿ ಹ್ರತ್ವಿಕ್ ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳು ಸಮ್ಮಾನ ಸ್ವೀಕರಿಸಿ ಮಾತನಾಡಿದ ಗಾಯತ್ರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು ವಿದ್ಯಾ ಸಂಸ್ಥೆಯ ಪ್ರಾಶುಂಪಾಲರಾದ ಗಣೇಶ್ ಮೊಗವೀರರವರ ಸಹಕಾರ ಮತ್ತು ಪ್ರೋತ್ಸಾಹದಿಂದ ಎಂದರು.
ಜನತಾ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು,ಕಾಲೇಜಿನ ಬೋಧಕ/ಬೋಧಕೇತರ ವ್ರಂದ, ಆರ್.ಎನ್.ಎಸ್. ಸಭಾಂಗಣದ ವ್ಯವಸ್ಥಾಪಕರು,
ಸಾಧಕ ವಿದ್ಯಾರ್ಥಿಯ ಪೋಷಕರು ಹಾಗೂ ಮನೆಯವರು ಉಪಸ್ಥಿತರಿದ್ದರು.











