ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಸಂವಿಧಾನದ ಚೌಕಟ್ಟಿಯನಲ್ಲಿ, ನನ್ನ ಇತಿಮಿತಿಯಲ್ಲಿ ಕ್ಷೇತ್ರದ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವುದು ಹಾಗೂ ಪಕ್ಷ ಸಂಘಟನೆಗೆ ಒತ್ತು ನೀಡಲು ಶ್ರಮಿಸುತ್ತೇನೆ. ಕೆ.ಪ್ರತಾಪಚಂದ್ರ ಶೆಟ್ಟಿಯವರನ್ನು ಹತ್ತಿರದಿಂದ ಬಲ್ಲವನಾಗಿದ್ದು ಅವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತೇನೆ. ಪಕ್ಷದ 1800 ಮತಗಳ ಜೊತೆಗೆ, ಕಾಂಗ್ರೆಸ್ ಪಕ್ಷ ಸಿದ್ದಾಂತದ ಬಗ್ಗೆ ಅಭಿಮಾನವಿರುವವರ ಮತವೂ ಲಭಿಸಿದರೆ ಗೆಲುವಿಗೆ ಅರ್ಥಪೂರ್ಣವಾಗುತ್ತದೆ ಎಂದು ವಿಧಾನ ಪರಿಷತ್ ಚುನಾವಣೆ ದ.ಕ ಉಡುಪಿ ಸ್ಥಳೀಯಾಡಳಿತ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು.






ಅವರು ಬ್ಲಾಕ್ ಕಾಂಗ್ರೆಸ್ ಕುಂದಾಪುರ ವತಿಯಿಂದ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಂಗಣದ ಮಿನಿಹಾಲ್‍ನಲ್ಲಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸ್ಥಳೀಯ ಸಂಸ್ಥೆಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ,ಸದಸ್ಯ ಶ್ರೀ.ಕೆ. ಪ್ರತಾಪಚಂದ್ರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿಧಾನ ಪರಿಷತ್‍ಗೆ ನಡೆಯುವ ಈ ಚುನಾವಣೆಯಲ್ಲಿ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರು ಮೊದಲ ಪ್ರಾಶಸ್ತ್ಯದಲ್ಲಿ ಗೆಲ್ಲಲು ನಮ್ಮ ಎಲ್ಲ ಮತದೊಂದಿಗೆ ಪಕ್ಷೇತರರ ಮತವೂ ಕೂಡಾ ಲಭಿಸುವಂತೆ ಮಾಡಬೇಕು. ಸ್ಥಳೀಯಾಡಳಿತದ ಮೂಲಕ ಆಯ್ಕೆಯಾಗುವ ಸದಸ್ಯರಿಗೆ ಮಹತ್ವದ ಜವಾಬ್ದಾರಿಗಳು ಇರುತ್ತವೆ. ಅದನ್ನು ಮಂಜುನಾಥ ಭಂಡಾರಿಯವರು ಸಮರ್ಥವಾಗಿ ನಿಭಾಯಿಸುತ್ತಾರೆ ಎನ್ನುವ ವಿಶ್ವಾಸವಿದೆ. ಹಿಂದೆ ಜನರ ಸಮಸ್ಯೆಗಳನ್ನು ಹಿಡಿದುಕೊಂಡು ಚುನಾಯಿತ ಪ್ರತಿನಿಧಿಗಳು ಸರ್ಕಾರಿ ಕಛೇರಿಗೆಗಳಿಗೆ ಹೋಗಬೇಕಿತ್ತು. ಈಗ ಆ ಸ್ಥಾನವನ್ನು ಮಧ್ಯವರ್ತಿಗಳು ತುಂಬಿದ್ದಾರೆ. ಈ ಹಂತಕ್ಕೆ ವ್ಯವಸ್ಥೆ ತಲುಪಿದೆ ಎಂದರು.
ನನಗೆ ಕಾಂಗ್ರೆಸ್ ಪಕ್ಷ ಸಾಕಷ್ಟು ಅವಕಾಶ, ಹುದ್ದೆಗಳನ್ನು ನೀಡಿದೆ. ಸಭಾಪತಿ ಸ್ಥಾನವನ್ನು ನೀಡಿದೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪಕ್ಷಕ್ಕೆ ನೀಡಿದ ಕೊಡುಗೆ ಗಮನಾರ್ಹವಾದುದು. ನನಗೂ ಕೂಡಾ ಅವರ ಋಣವಿದೆ. ಹಾಗಾಗಿ ನನ್ನಿಂದ ಪಕ್ಷನಿಷ್ಠೆಗೆ ಧಕ್ಕೆಯಾಗುವುದಿಲ್ಲ. ಪಕ್ಷಕ್ಕೆ ನನ್ನ ಸೇವೆ ನಿರಂತರವಾಗಲಿದೆ ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ ಕೊಡವೂರು, ಕೆಪಿಸಿಸಿ ಸಂಯೋಜಕಿ, ಕುಂದಾಪುರ ಕ್ಷೇತ್ರ ವೀಕ್ಷಕರಾದ ಮಮತಾ ಗಟ್ಟಿ, ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಕೆದೂರು ಸದಾನಂದ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು, ನವೀನ್ ಡಿಸೋಜ, ಕೃಷ್ಣದೇವ ಕಾರಂತ, ಬಿ.ಹಿರಿಯಣ್ಣ, ವಿಕಾಸ್ ಹೆಗ್ಡೆ, ದೇವಕಿ ಸಣ್ಣಯ್ಯ, ದಿನೇಶ ಪುತ್ರನ್, ಪ್ರಸನ್ನಕುಮಾರ ಶೆಟ್ಟಿ, ರೋಶನ್ ಕುಮಾರ್ ಶೆಟ್ಟಿ, ಇಚ್ಛಿತಾರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿ ಕುಂದಾಪುರ ಬ್ಲಾಕ್ ವ್ಯಾಪ್ತಿಯಲ್ಲಿ 119 ಸದಸ್ಯರನ್ನು ಹೊಂದಿ, ಜಿಲ್ಲೆಯಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ವಿನೋದ್ ಕ್ರಾಸ್ತಾ ಕಾರ್ಯಕ್ರಮ ನಿರ್ವಹಿಸಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಚಂದ್ರಶೇಖರ ಖಾರ್ವಿ ವಂದಿಸಿದರು.



ಬೈಂದೂರು:ಬೆಳಿಗ್ಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಚುನಾವಣಾ ಪ್ರಚಾರ ಸಭೆ ನಡೆಯಿತು. ಮಾಜಿ ಸಭಾಪತಿ, ವಿಧಾನ ಪರಿಷತ್ ಸದಸ್ಯ ಕೆ,.ಪ್ರತಾಪಚಂದ್ರ ಶೆಟ್ಟಿ, ಅಭ್ಯರ್ಥಿ ಮಂಜುನಾಥ ಭಂಡಾರಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಜು ಪೂಜಾರಿ, ಪ್ರಕಾಶ್ಚಂದ್ರ ಶಟ್ಟಿ, ನವೀನ್ ಡಿಸೋಜ, ಗೌರಿ ದೇವಾಡಿಗ, ಎಮ,.ಎಸ್ ಮಹಮ್ಮದ್ ಮೊದಲಾದವರು ಉಪಸ್ಥಿತರಿದ್ದರು.
ಬ್ಲಾಕ್ ಅಧ್ಯಕ್ಷ ಮದನ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು.











