ಯೋಗಾಸನ ಸ್ಪರ್ಧೆ: ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ

0
291

Click Here

Click Here

ಕುಂದಾಪುರ ಮಿರರ್ ಸುದ್ದಿ…

Click Here

ಕುಂದಾಪುರ :ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಯೋಗಾಸನ ತಂಡವನ್ನು ಪ್ರತಿನಿಧಿಸಿದ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ನಿರೀಕ್ಷಾ ಮತ್ತು ತನ್ವಿತಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಅಯ್ಕೆಯಾಗಿದ್ದು, ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೋಗವೀರ ಮನೆಗೆ ತೆರಳಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅಭಿನಂದಿಸಿದರು.

ಬಳಿಕ ಮಾತನಾಡಿ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು. ಈರ್ವರೂ ವಿದ್ಯಾರ್ಥಿನಿಯರು ಜನತಾ ವಿದ್ಯಾ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದರು. ಕ್ರೀಡಾಸ್ಫೂರ್ತಿಯಾಗಿ ಉತ್ತಮ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯ ಮತ್ತು ರಾಷ್ಟ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದು ಎಂದರು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಯೋಗ ತರಬೇತುದಾರನ್ನು ನಿಯೋಜನೆ ಮಾಡುತ್ತೇನೆ, ರಾಷ್ಟ್ರ ಮತ್ತು ಒಲಂಪಿಕ್ಸ್ ನಲ್ಲಿ ವಿದ್ಯಾರ್ಥಿಗಳು ಸ್ಪರ್ಧೆ ಮಾಡಿ ದೇಶಕ್ಕೆ ಕೀರ್ತಿ ತಂದು ಕೊಡಲಿ ಎಂದು ಹೇಳಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ತನ್ವಿತಾ ಜನತಾ ಕಾಲೇಜು ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹ ನೀಡುತ್ತಾರೆ. ಶಿಕ್ಷಣ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಹೆಮ್ಮಾಡಿ ಕಾಲೇಜನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆ ಎಂದರು.

ಜನತಾ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ  ಗಣೇಶ ಮೊಗವೀರರವರು,
ಕಾಲೇಜಿನ ಬೋಧಕ/ಬೋಧಕೇತರ ವ್ರಂದ,
ವಿದ್ಯಾರ್ಥಿ ಪೋಷಕರು ಹಾಗೂ ಮನೆಯವರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here