ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಅಕ್ಟೋಬರ್ 29 ಮತ್ತು 30ರಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ರಜತಾದ್ರಿ ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ 2024- 25ರಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸಿನಾನ್ ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ, ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾನೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.