ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಪಾದಾಚಾರಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತ್ರಾಸಿ ಗ್ರಾಮದ ಹೊಸಪೇಟೆ ಶೇಖರ ದೇವಾಡಿಗ ಎಂಬವರ ಮನೆಯ ಎದುರುಗಡೆ ಗುರುವಾರ ನಡೆದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕುಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.
ಕುಪ್ಪ ಪೂಜಾರಿ ತ್ರಾಸಿಯಿಂದ ಕುಂದಾಪುರ ಕಡೆಗೆ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಂದರ್ಭ MH 01 DX 5245 ಸಂಖ್ಯೆಯ ಕಾರು ಹಿಂದಿನಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಕುಪ್ಪ ಪೂಜಾರಿಯವರನ್ನು ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.