ಸಹಕಾರಿ ಸಂಸ್ಥೆಗಳಿಂದ ಸ್ವಾಲಂಬನೆ ಸಾಧ್ಯ : ಎಂ.ಎನ್.ಆರ್
ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸಹಕಾರಿ ಸಂಘಗಳು ಉತ್ತಮ ಸೇವೆಯೊಂದಿಗೆ ವಿಕಸಿತಗೊಳ್ಳುತ್ತಾ ಸದಸ್ಯರ ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡುವುದರೊಂದಿಗೆ ಸರ್ವಾಂಗೀಣ ಪ್ರಗತಿಗೆ ಸಹಕಾರ ನೀಡುತ್ತಿವೆ ಎಂದು ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಾರಟ ಮಹಾಮಂಡಳದ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಅವರು ಮಂದಾರ್ತಿಯ ರಥಬೀದಿಯಲ್ಲಿ ನಡೆದ ಮಂದಾರ್ತಿ ಸೇವಾ ಸಹಕಾರಿ ಸಂಘದ ಶತಮಾನೋತ್ಸವದ ಸಂಭ್ರಮ ” ಶತಸಾರ್ಥಕ್ಯ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಹಕಾರ ಸಂಘಗಳು ಪಾರದರ್ಶಕವಾದ ಸೇವೆಯ ಮೂಲಕ ವಿಶ್ವಾಸ ಗಳಿಸಿವೆ. ಇಲ್ಲಿ ಬಡ್ಡಿದರ, ಸದಸ್ಯರಿಗೆ ಸಿಗುವ ಸೇವೆ ಎಲ್ಲವೂ ಕೂಡಾ ಪಾರದರ್ಶಕವಾಗಿ ತಿಳಿಸಲಾಗುತ್ತದೆ. ಇವತ್ತು ಸಹಕಾರ ಕ್ಷೇತ್ರ ಕಡಿಮೆ ಬಡ್ಡಿಯಲ್ಲಿ ಸಾಲ ನೀಡುತ್ತಿದೆ. ಅವಿಭಜಿತ ಜಿಲ್ಲೆಯ ಸಹಕಾರ ಸಂಘಗಳು ಕೂಡಾ ಲಾಭದಾಯಕವಾಗಿ ಮುನ್ನೆಡೆಯುತ್ತಿದೆ ಎಂದರು.
ಸಭಾಧ್ಯಕ್ಷತೆಯನ್ನು ಮಂದಾರ್ತಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಚ್. ಗಂಗಾಧರ ಶೆಟ್ಟಿ ಮಾತನಾಡುತ್ತಾ 1925 ರಲ್ಲಿ ಆರಂಭಗೊಂಡ ಸಂಘವನ್ನು ಎಲ್ಲರೂ ತಮ್ಮ ಶ್ರಮದಿಂದ ಕಟ್ಟಿ ಬೆಳೆಸಿದ್ದಾರೆ. ಹಿಂದಿನ ಎಲ್ಲಾ ಅಧ್ಯಕ್ಷರು, ಸಿಇಓರವರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಸಿಬ್ಬಂದಿಗಳ ವಿನಯ, ವಿಧೇಯತೆಯಿಂದ ಸಂಸ್ಥೆ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.
ಈ ಸಂದರ್ಭದಲ್ಲಿ ಶತಮಾನೋತ್ಸವದ ಸಂಭ್ರಮದ ಸ್ಮರಣ ಸಂಚಿಕೆಯನ್ನು ಡಾ.ಎಂ.ಎನ್.ರಾಜೇಂದ್ರಕುಮಾರ್ ಬಿಡುಗಡೆಗೊಳಿಸಿ, ನೂತನ ನವೋದಯ ಸ್ವಸಹಾಯ ಸಂಘವನ್ನು ಉದ್ಘಾಟಿಸಿದರು.
ಡಾ. ಎಮ್.ಎನ್.ರಾಜೇಂದ್ರ ಕುಮಾರ್, ಡಾ.ಜಯಕರ ಶೆಟ್ಟಿ ಎಮ್.,ಬಿ.ಜಯಕರ ಶೆಟ್ಟಿ ಇಂದ್ರಾಳಿ, ಮಾಜಿ ನಿರ್ದೇಶಕರುಗಳನ್ನು, ಮಾಜಿ ಕಾರ್ಯನಿರ್ವಾಹಣಾಧಿಕಾರಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಗಂಗಾಧರ ಶೆಟ್ಟಿ ಮತ್ತು ಆಶಾ ಜಿ. ಶೆಟ್ಟಿ ದಂಪತಿಗಳನ್ನು, ನಿವೃತ್ತ ಸಿಇಓಗಳಾದ ಶಂಭು ಶೆಟ್ಟಿ , ಕೆ.ರಾಜರಾಮಶೆಟ್ಟಿ, ,ಗೋಪಾಲ ಮರಕಾಲ ಹಾಗೂ ಮಾಜಿ ನಿರ್ದೇಶಕರುಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಎಚ್.ಧನಂಜಯ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾದ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಜಯಕರ ಶೆಟ್ಟಿ ಎಮ್., ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಮಂಗಳೂರು ದ.ಕ.ಜಿ.ಕೇ.ಸ.ಬ್ಯಾಂಕ್ ನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಹಿರಿಯಡ್ಕ್ ರೈತರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಬೆಳ್ಳಂಪಳ್ಳಿ, ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ರಾಜೇಶ್ ರಾವ್, ಹೆಗ್ಗುಂಜೆ ಗ್ರಾ.ಪಂ.ಅಧ್ಯಕ್ಷ ರಾಮಕೃಷ್ಣ, ಕಾಡೂರು ಗ್ರಾ.ಪಂ. ಅಧ್ಯಕ್ಷ ಜಲಂಧರ ಶೆಟ್ಟಿ, ಬಿಲ್ಲಾಡಿ ಗ್ರಾ.ಪಂ.ಅಧ್ಯಕ್ಷೆ ಶಾರದ, ಸಂಘದ ಉಪಾಧ್ಯಕ್ಷ ಕೆ.ಶುಭಶಂಕರ್ ರಾವ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಮಕೃಷ್ಣ ಶೆಟ್ಟಿ, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.
ಸಂಸ್ಥೆಯ ನಿರ್ದೇಶಕರಾದ ವಿಠ್ಠಲ ಶೆಟ್ಟಿ ಸ್ವಾಗತಿಸಿ, ಸಂಘದ ನಿರ್ದೇಶಕ ಗುರುಪ್ರಸಾದ್ ವಂದಿಸಿದರು. ಸುಪ್ರಿತಾ ಡಿ.ಶೆಟ್ಟಿ ಪ್ರಾರ್ಥಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.











