ಕುಂದಾಪುರ :ದಿವಂಗತ ಎ.ಜಿ. ಕೊಡ್ಗಿ ಜಗತ್ತಿಗೇ ಮಾದರಿ : ಶಾಸಕ ಗುರ್ಮೆ

0
311

Click Here

Click Here

ಅಮಾಸೆಬೈಲಿನಲ್ಲಿ ಎಜಿಕೊಡ್ಗಿ ಒಂದು ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ ಕಾರ್ಯಕ್ರಮ

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ರಾಜಕೀಯ, ಕೃಷಿ, ನೆಲ, ಜಲ, ಸಂಸ್ಕೃತಿಯನ್ನು ಸಮವಾಗಿ ಪ್ರೀತಿಸುತ್ತಿದ್ದ ದಿವಂಗತ ಎ.ಜಿ.ಕೊಡ್ಗಿಯವರು ಸಾರ್ವಕಾಲಿಕ ಸ್ಮರಣೀಯರು ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.

ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಸಭಾಂಗಣದಲ್ಲಿ ನಡೆದ ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ.), ಅಮಾಸೆಬೈಲು ಕರ್ಣಾಟಕ ಬ್ಯಾಂಕ್ (ಲಿ.), ಬೆಂಗಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳ ಗ್ರಾಮ ಪಂಚಾಯತ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ಅಮಾಸೆಬೈಲು ಹಾಗೂ ದಿ. ಎ. ಜಿ. ಕೊಡ್ಲಿ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ಕೊಡ್ಗಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Click Here

ಮಂಗಳೂರು ಕರ್ಣಾಟಕ ಬ್ಯಾಂಕ್ ಲಿ., ಡಿ.ಜಿ.ಎಮ್. ಗೋಪಾಲಕೃಷ್ಣ ಸಾಮಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕ ನುಡಿಗಳ್ನಾಡಿದರು.

ಇದೇ ಸಂದರ್ಭ ಸಾಧಕ ಕೃಷಿಕ ಶೀನ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ಶಾಲಾ ವಾಹನ ನಿರ್ವಹಣೆಯ ಚೆಕ್ ವಿತರಿಸಲಾಯಿತು.

ಕುಂದಾಪುರ ವಿಧಾನ ಸಭಾ ಕ್ಷೇತ್ರದ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್., ಅಮಾಸೆಬೈಲು ಗ್ರಾ.ಪಂ.ಅಧ್ಯಕ್ಷೆ ಮಲ್ಲಿಕಾ ಕುಲಾಲ್, ಅಮಾಸೆಬೈಲು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ಸುಕೇಶ್ ಭಂಡಾರಿ ಉಪಸ್ಥಿತರಿದ್ದರು.

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ ನ‌ ಅಧ್ಯಕ್ಷ ಅಶೋಕ ಕುಮಾರ ಕೊಡ್ಗಿ ಸ್ವಾಗತಿಸಿ, ಅಮಾಸೆಬೈಲು ಸರ್ಕಾರೀ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾದ್ಯಾಯ ಶಶಿಧರ ಶೆಟ್ಟಿ ವಂದಿಸಿದರು. ಸತ್ಯನಾರಾಯಣ ರಾವ್ ರಟ್ಟಾಡಿ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here