ಕುಂದಾಪುರ :ರಾಜ್ಯ ಸರ್ಕಾರ ಮಠಮಂದಿರಗಳ ಮಧ್ಯೆ ಕೈ ಹಾಕುತ್ತಿರುವುದು ಖಂಡನೀಯ : ಶಾಸಕ ಕಿರಣ್ ಕೊಡ್ಗಿ ಆಕ್ರೋಶ

0
303

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ರಾಜ್ಯ ಸರಕಾರ ಒಂದೇ ಧರ್ಮದ ಪರವಾಗಿ ಕಾರ್ಯಾಚರಣೆ ಮಾಡುತ್ತಿದೆ. ರೈತರ ಭೂಮಿ, ಮಠ ಮಂದಿರದ ಭೂಮಿಗಳ ಪಹಣಿಯಲ್ಲಿ ವಕ್ಫ್ ಭೂಮಿ ಎಂದು ನೋಟಿಸ್ ಕೊಟ್ಟು ಕಾಂಗ್ರೆಸ್ ಸರಕಾರ ರೈತರನ್ನು ಅತಂತ್ರರನ್ನಾಗಿಸಿದೆ. ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಬಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇದರ ನೇತೃತ್ವದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿಗೆ ನಮೂದಿಸಿದ ರಾಜ್ಯ ಸರಕಾರದ ಧೋರಣೆ ಖಂಡಿಸಿ ಕುಂದಾಪುರದಲ್ಲಿ ಮಂಗಳವಾರ ಸಂಜೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

Click Here

ಕೇಂದ್ರ ಸರಕಾರ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ಯೋಚನೆಯಲ್ಲಿರುವಾಗಲೇ ಸಿದ್ಧರಾಮಯ್ಯ ನೇತೃತ್ವದ ಸರಕಾರದಲ್ಲಿ ವಕ್ಫ್ ಸಚಿವ ಜಮೀರ್ ಅಹಮ್ಮದ್ ಅವರು ತುರ್ತಾಗಿ ವಕ್ಫ್ ಹೆಸರಿನಲ್ಲಿ ಭೂಮಿ ನೊಂದಾಯಿಸುತ್ತಿರುವುದು ಖಂಡನೀಯ. ಈ ಬಗ್ಗೆ ಪ್ರತಿಭಟಿಸದಿದ್ದರೆ ಮುಂದಿನ ದಿನಗಳಲ್ಲಿ ತಾಲೂಕಿನಲ್ಲೂ ಇಂತಹ ಪ್ರಕರಣಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು. ತಮ್ಮ ತಮ್ಮ ಭೂಮಿಯ ದಸ್ತಾವೇಜನ್ನು ಪರಿಶೀಲಿಸಬೇಕಾದ ಕಾಲ ಸನ್ನಿಹಿತವಾಗಿದೆ ಎಂದು ಹೇಳಿದ ಅವರು, ಈಗಾಗಲೇ ರಾಜ್ಯಾದ್ಯಂತ ಹೋರಾಟ ಪ್ರಾರಂಭವಾಗಿದ್ದು, ರಾಜ್ಯ ಸರಕಾರ ೧೯೭೪ರ ಗಜೆಟ್ ನೋಟಿಫಿಕೇಶನ್ ರದ್ದು ಮಾಡುವ ತನಕ ಈ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ನೇತೃತ್ವದ ಸರಕಾರದ ದುರಾಡಳಿತದಿಂದ ಬೀದಿಗಳಿದು ಹೋರಾಟ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಕಳೆದು ಒಂದುವರೆ ವರ್ಷಗಳಿಂದ ಕಾಂಗ್ರೆಸ್ ನೇತೃತ್ವದ ಸರಕಾರದ ಅವ್ಯವಹಾರಗಳು, ಹಗರಣಗಳು ನಡೆಸಿ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೆ ಜನರಿಗೆ ದ್ರೋಹ ಬಗೆಯುತ್ತಿದೆ ಎಂದು ಅವರು ಹೇಳಿದರು.

ತುಷ್ಟೀಕರಣಕ್ಕಾಗಿ ರೈತರ, ಭೂಮಾಲಕರ, ದೇವಾಲಯಗಳ, ಮಠ ಮಂದಿರಗಳ ಭೂಮಿಯನ್ನು ವಕ್ ಭೂಮಿ ಎಂದು ಪಹಣಿಯಲ್ಲಿ ನಮೂದಿಸಿ ನೋಟಿಸ್ ನೀಡಿರುವುದು ರಾಜ್ಯದ ಕಾಂಗ್ರೆಸ್ ಸರಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ನಿದರ್ಶನ ಎಂದು ಬಿಜೆಪಿ ಮುಖಂಡ ಬೈಕಾಡಿ ಸುಪ್ರಸಾದ ಶೆಟ್ಟಿ ಹೇಳಿದರು.

ಮಂಡಲ ಮಾಜಿ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮಾತನಾಡಿದರು.

ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಪ್ರಸ್ತಾವಿಸಿದರು. ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ.ಎಸ್., ಸತೀಶ್ ಪೂಜಾರಿ ವಕ್ವಾಡಿ, ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಪುರಸಭೆ ಸದಸ್ಯರು, ಬಿಜೆಪಿ ಕುಂದಾಪುರ ಮಂಡಲದ ಪದಾಧಿಕಾರಿಗಳು, ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Click Here

LEAVE A REPLY

Please enter your comment!
Please enter your name here