ಕೋಟ ಪಡುಕರೆ ಕಾಲೇಜಿನ ಪ್ರಾಂಶುಪಾರಾಗಿ ಡಾ. ರಾಜೇಂದ್ರ ಎಸ್. ನಾಯಕ ಅಧಿಕಾರ ಸ್ವೀಕಾರ

0
251

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕೋಟ: ಇಲ್ಲಿನ ಕೋಟ ಪಡುಕರೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ರಾಜೇಂದ್ರ ಎಸ್ ನಾಯಕ ಇತ್ತೀಚಿಗೆ ಅಧಿಕಾರ ಸ್ವೀಕರಿಸಿದರು.

Click Here

ಇವರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು, ಶ್ರೀ ಕಾಳವರ ವರದರಾಜ್ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕೋಟೇಶ್ವರ ಹಾಗೂ ಈ ಹಿಂದೆ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕೆರೆ ಇಲ್ಲಿ ಹೀಗೆ ಈ ಮೂರು ಸಂಸ್ಥೆಗಳಲ್ಲಿ ಯಶಸ್ವಿ ಪ್ರಾಂಶುಪಾಲರಾಗಿ ಆಡಳಿತ ನಡೆಸಿ ಜನಮನ್ನಣೆಗೆ ಪಾತ್ರರಾಗಿದ್ದಾರೆ. ಹಲವು ಮಕ್ಕಳ ತಾಯಿ ಶ್ರೀ ಅಮೃತೇಶ್ವರಿ ದೇವಳದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ ಇವರು ಮಂಗಳೂರು ವಿಶ್ವವಿದ್ಯಾಲಯದ ಅಕಾಡೆಮಿ ಕೌನ್ಸಿಲ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ ,ಕವಿಯಾಗಿ, ಸಾಹಿತಿಯಾಗಿ ವಾಗ್ಮಿಯಾಗಿ ಸಾರ್ವಜನಿಕ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಲ್ಪಟ್ಟಿದ್ದಾರೆ.

Click Here

LEAVE A REPLY

Please enter your comment!
Please enter your name here