ಕುಂದಾಪುರ ಮಿರರ್ ಸುದ್ದಿ…
ಕೋಟ: ಇಲ್ಲಿನ ಪುರಾಣ ಪ್ರಸಿದ್ಧ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇಗುಲಕ್ಕೆ ಮೇಘಾಲಯ ರಾಜ್ಯಪಾಲ ಸಿ ಎಚ್ ವಿಜಯಶಂಕರ್ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅಧ್ಯಕ್ಷ ಆನಂದ್ ಸಿ ಕುಂದರ್ ಶಾಲು ಹೋದಿಸಿ ಫಲಪುಷ್ಭ ಪ್ರಸಾದ ನೀಡಿ ಗೌರವಿಸಿದರು. ಕುಂದಾಪುರ ಉಪವಿಭಾಗಾಧಿಕಾರಿ ಮಹೇಶ್ಚಂದ್ರ, ದೇಗುಲದ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರಾದ ಸುಧಾ ಎ ಪೂಜಾರಿ, ಜ್ಯೋತಿ ದೇವದಾಸ್ ಕಾಂಚನ್,ಎ. ಶಿವ ಪೂಜಾರಿ, ಗಣೇಶ್ ನೆಲ್ಲಿಬೆಟ್ಟು, ಸುಭಾಷ್ ಶೆಟ್ಟಿ, ಚಂದ್ರ ಆಚಾರ್, ರತನ್ ಐತಾಳ್, ಅರ್ಚಕ ಪ್ರತಿನಿಧಿ ಸುಬ್ರಾಯ ಜೋಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಮಹಿಳಾ ಮೋರ್ಚಾದ ರೋಹಿಣಿ ಪೈ,ಕೋಟ ಪಂಚಾಯತ್ ಉಪಾಧ್ಯಕ್ಷ ಪಾಂಡು ಪೂಜಾರಿ, ಸದಸ್ಯರಾದ ಭುಜಂಗ ಗುರಿಕಾರ, ಮತ್ತಿತರರು ಇದ್ದರು.