ಕುಂದಾಪುರ :ಪ್ರತಿಭಾ ಕಾರಂಜಿ – ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0
302

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ – ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಪ್ರತೀಕ್ ಜಿ.ಎಂ.(ಚರ್ಚಾ ಸ್ಪರ್ಧೆ) ಮತ್ತು ವರ್ಮಿತ(ಸಂಸ್ಕ್ರತ ಧಾರ್ಮಿಕ ಪಠಣ) ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಾಲೆಯಲ್ಲಿ ಶಿಕ್ಷಕರ ತರಬೇತಿ ಮತ್ತು ಪ್ರತೀ ವಾರ ಸಂಪನ್ಮೂಲ ವ್ಯಕ್ತಿಗಳಿಂದ ನಡೆಯುವ ಪಠ್ಯೇತರ ಚಟುವಟಿಕೆಗಳು ಮಕ್ಕಳ ಈ ಸಾಧನೆಗೆ ಸಹಕಾರಿಯಾಗಿದೆ. ಶಾಲೆಯಲ್ಲಿ ನಿರಂತರವಾಗಿ ನಡೆಯುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಕಲಾಸಕ್ತಿ ಮತ್ತು ಪ್ರತಿಭೆಯ ಅನಾವರಣಕ್ಕೆ ಸಹಾಯವಾಗಿದೆ. ಈಗಾಗಲೇ ಸಂಸ್ಥೆಯ ಹಲವಾರು ವಿದ್ಯಾರ್ಥಿಗಳು ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟವನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ವಿಜೇತ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ. ಹಾಗೂ ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಗೌರವಿಸಿದರು.

Click Here

LEAVE A REPLY

Please enter your comment!
Please enter your name here