ಕುಂಭಾಸಿ: ಇನ್ನೋವಾ ಕಾರಿಗೆ ಇನ್ಸುಲೇಟರ್ ಡಿಕ್ಕಿ – ಏಳು ಜನ ಗಂಭೀರ

0
266

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ರಿವರ್ಸ್ ಬರುತ್ತಿದ್ದ ಇನ್ನೋವಾ ಕಾರಿಗೆ ವೇಗವಾಗಿ ಬಂದ ಇನ್ಸುಲೇಟರ್ ಲಾರಿಯೊಂದು ಡಿಕ್ಕಿಹೊಡೆದ ಪರಿಣಾಮ ಇನ್ನೋವಾ ಕಾರಿನಲ್ಲಿದ್ದ ಏಳು ಜನರು ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು, ಇನ್ಸುಲೇಟರ್ ವಾಹನದಲ್ಲಿದ್ದ ಚಾಲಕನೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂಭಾಸಿ ಸಮೀಪದ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಎದುರುಗಡೆ ನಡೆದಿದೆ.

Click Here

ಕೇರಳ ಮೂಲದ ಇನ್ನೋವಾ ಕಾರಿನಲ್ಲಿ ನಾಲ್ಕು ಜನ ಪ್ರವಾಸಕ್ಕೆಂದು ಬಂದಿದ್ದರೆನ್ನಲಾಗಿದ್ದು ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭ ಕುಮಭಾಸಿಯ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ದ್ವಾರಗೋಪುರದ ಬಳಿ ಪಾಸ್ ಆಗುತ್ತಿದ್ದಂತೆ ದೇವಸ್ಥಾನಕ್ಕೆ ಹೋಗಲೆಂದು ಕಾರನ್ನು ರಿವರ್ಸ್ ತೆಗೆದುಕೊಳ್ಳಉತ್ತಿದ್ದರೆನ್ನಲಾಗಿದೆ.

ಇದೇ ಸಂದರ್ಭ ಗೋವಾ ಕಡೆಯಿಂದ ಮೀನು ತುಂಬಿಸಿಕೊಂಡು ಕೇರಳ ಕಡೆಗೆ ಪ್ರಯಾಣಸುತ್ತಿದ್ದ ಮಂಗಳೂರು ನೋಂದಣಿ ಸಂಖ್ಯೆಯ ಹೊನ್ನಾವರ ಮೂಲದ ಇನ್ಸುಲೇಟರ್ ವಾಹನ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇನ್ನೋವಾ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಇನ್ಸುಲೇಟರ್ ವಾಹನ ಪಲ್ಟಿಯಾಗಿ ಬಿದ್ದಿದೆ. ಕುಂದಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೆಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Click Here

LEAVE A REPLY

Please enter your comment!
Please enter your name here