ಕೊಲ್ಲೂರು: ಚುನಾವಣಾ ಸಮೀಕ್ಷೆ ತಲೆಕೆಳಗಾಗಲಿದೆ – ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

0
521

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ದೇಶದೆಲ್ಲೆಡೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಐಎನ್ಡಿಐಎ ಘಟ್ ಬಂಧನ್ ಜಯಭೇರಿ ಭಾರಿಸಲಿದೆ ಎಂದು ಕರ್ನಾಟಕದ ಉಪಮುಖ್ಯಮಂತ್ರಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಗುರುವಾರ ಬೆಳಿಗ್ಗೆ ಮುರ್ಡೇಶ್ವರಕ್ಕೆ ಸಮಾವೇಶಕ್ಕೆ ತೆರಳುವ ಮುನ್ನ ಕೊಲ್ಲೂರು ಮೂಕಾಂಬಿಕೆಯ ಸನ್ನಿಧಿಯಲ್ಲಿ ಪತ್ನಿ ಸಮೇತ ಪೂಜೆ ಸಲ್ಲಿಸಿದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.

ದೇಶದ ವಿಧಾನಸಭೆಗಳ ಚುನಾವಣೆ ಬಗ್ಗೆ ಸಮೀಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕರ್ನಾಟಕದಲ್ಲಿಯೂ ಸಮೀಕ್ಷೆ ನಡೆದಿತ್ತು. ಆದರೆ ಅದು ತಲೆಕೆಳಗಾಗಿದೆ. ಹಾಗಾಗಿ ಚುನಾವಣಾ ಸಮೀಕ್ಷೆ ಬಗ್ಗೆ ನಂಬಿಕೆಯಿಲ್ಲ. ಎಲ್ಲೆಡೆ ಐಎನ್ಡಿಐಎ ಜಯಭೇರಿ ಬಾರಿಸುತ್ತದೆ ಎಂದರು. ರಾಜ್ಯದ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪ್ರಯತ್ನವನ್ನು ನಾವು ಪ್ರಾಮಾಣಿಕವಾಗಿ ಮಾಡಿದ್ದೇವೆ. ಉಳಿದದ್ದು ದೇವರಿಗೆ ಬಿಟ್ಟಿದ್ದೇವೆ ಎಂದರು. ಕೊಲ್ಲೂರು ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ ಗೆ ಮಣೆ ಹಾಕಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ಚುನಾವಣಾ ಸಂದರ್ಭದಲ್ಲಿ ನೀಡಿದ ಮಾತಿನಂತೆ ನಡೆದುಕೊಂಡಿದ್ದೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದರು.

Click Here

ಬಿಪಿಎಲ್ ಕಾರ್ಡ್ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಯಾವುದೇ ಅರ್ಹ ಬಡವರಿಗೆ ಅನ್ಯಾಯವಾಗಲು ರಾಜ್ಯ ಸರ್ಕಾರ ಬಿಡುವುದಿಲ್ಲ. ಒಂದೊಮ್ಮೆ ಯಾರಿಗಾದರೂ ಬಿಪಿಎಲ್ ಕಾರ್ಡ್ ತಪ್ಪಿ ಹೋದರೆ ಹೊಸದಾಗಿ ಅರ್ಜಿ ಪಡೆದುಕೊಂಡು ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಬಡವರ ವಿರೋಧಿಯಾಗಿ ವರ್ತಿಸುವುದಿಲ್ಲ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುವ ನಬಾರ್ಡ್ ಸಾಲದ ಪೈಕಿ ಶೇ 58ನ್ನು ಕಡಿತಗೊಳಿಸಲು ತೀರ್ಮಾನಿಸಿರುವುದು ಖಂಡನೀಯ. ರಾಜ್ಯಕ್ಕೆ ಮೊದಲಿನಿಂದ ಅನ್ಯಾಯ ನಡೆಯುತ್ತಲೇ ಇದೆ. ನಂದಿನಿ ಹಾಲಿನ ಮಾರುಕಟ್ಟೆ ಬಗ್ಗೆ ದೆಹಲಿಗೆ ಹೋಗಿದ್ದು, ಇದೇ ಸಂದರ್ಭ ಹಣಕಾಸು ಸಚಿವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದರು.

ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಪೊಲೀಸರ ಕೆಲಸ ಪೊಲೀಸರು ಮಾಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಅವರ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಮಗೆ ರಕ್ಷಣೆ ಕೊಡಬೇಕು. ಈ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ ಎಂದರು.

ಈ ಸಂದರ್ಭ ಮೀನುಗಾರಿಕಾ ಸಚಿವ ಮಾಂಕಾಳ್ ವೈದ್ಯ, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಸ್ಪಿ ಕೆ ಅರುಣ್ ಕುಮಾರ್, ಮಾಜೀ ಶಾಸಕ ಕೆ ಗೋಪಾಲ ಪೂಜಾರಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ, ಮಾಜೀ ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜು ಪೂಜಾರಿ, ಮುಖಂಡರುಗಳಾದ ಉದ್ಯಮಿ ರಾಜೇಶ್ ಕಾರಂತ್, ಸಹನಾ ಸುರೇಂದ್ರ ಶೆಟ್ಟಿ ಮೊದಲಾದವರು ಇದ್ದರು.

Click Here

LEAVE A REPLY

Please enter your comment!
Please enter your name here