ಮೂಡ್ಲಕಟ್ಟೆ ಎಂ ಐ ಟಿ: ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ

0
448

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಘಟಕದ ಸಹಯೋಗದೊಂದಿಗೆ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕ್ ಘಟಕ ಸಭಾಪತಿ ಜಯಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯವೈಖರಿ ಅದರ ಮಹತ್ವವನ್ನು ವಿವರಿಸುತ್ತ ಇಂದಿನ ಯುವ ಪೀಳಿಗೆ ಸಮಾಜಮುಖಿ ಕೆಲಸಗಳಲ್ಲಿ ಸಾದ್ಯವಾದಷ್ಟು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಭಾರತೀಯ ರೆಡ್‌ ಕ್ರಾಸ್‌ನ ಖಜಾಂಚಿ ಶಿವರಾಮ ಶೆಟ್ಟಿ ಸ್ವಯಂ ಸೇವಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

Click Here

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆಯವರು ಮಾತನಾಡಿ ರಕ್ತದಾನವೇ ಮಹಾದಾನ, ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ವಿಧ್ಯಾರ್ಥಿಗಳನ್ನು ಹುರಿದುಂಬಿಸಿದರು. ಯೂತ್ ರೆಡ್ ಕ್ರಾಸ್ ವತಿಯಿಂದ ರಕ್ತ ದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಮ್ಯಾನೇಜಿಂಗ್ ಕಮಿಟಿಯ ಸದಸ್ಯರಾದ ಗಣೇಶ್ ಆಚಾರ್, ಸದಾಶಿವ ಶೆಟ್ಟಿ, ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ವರುಣ್ ಕುಮಾರ್,ಕಾಲೇಜು ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಧ್ಯಾರ್ಥಿನಿ ಸುಷ್ಮಿತ ಸ್ವಾಗತಿಸಿದರು, ತೇಜಸ್ ಕಾರ್ಯಕ್ರಮ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here