ಕುಂದಾಪುರ ಮಿರರ್ ಸುದ್ದಿ…
ಕೊಲ್ಲೂರು: ಕರ್ನಾಟಕ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಶುಕ್ರವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.





ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ರಾಜ್ಯಪಾಲರನ್ನು ಸ್ವಾಗತಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮರಾವ್, ಸಹಾಯಕ ಆಯುಕ್ತರಾದ ಕೆ.ರಾಜು, ಎಸ್ಪಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು, ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.











