ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಮತ್ತು ಮತ್ತು ಜಾಗೃತಿ ಜಾಥಾ ಕಾರ್ಯಕ್ರಮ

0
286

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಗ ಇಲಾಖೆ, ಯುವ ರೆಡ್ ಕ್ರಾಸ್ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್ ಸೂಸೈಟಿ ಕುಂದಾಪುರ, ಗ್ರಾಮ ಪಂಚಾಯಿತ್ ಬಸ್ರೂರು ಇವರ ಸಹಭಾಗಿತ್ವದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಮತ್ತು ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಗೌರವಾನ್ವಿತ ೨ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್ಎಪ್ ಸಿ ನ್ಯಾಯವಾದಿ ರೋಹಿಣಿ.ಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಮಾಜದಲ್ಲಿ ಯುವ ಜನಾಂಗದಿಂದ ಏಡ್ಸ್ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಮಾಡುವ ಮೂಲಕ ಏಡ್ಸ್ ಎಂಬ ಮಾರಕ ರೋಗ ನಿಯಂತ್ರಣ ಮಾಡಲು ಸಾಧ್ಯ ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ ಪ್ರೇಮಾನಂದ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಅತಿಥಿಗಳಾಗಿ ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ್ ಹಂದೆ, ಕುಂದಾಪುರ ರೆಡ್ ಕ್ರಾಸ್ ಸೊಸೈಟಿನ ಅಧ್ಯಕ್ಷ ಜಯಕರ ಶೆಟ್ಟಿ, ಕುಂದಾಪುರ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Click Here

ಸಂಪನ್ಮೂಲ ವ್ಯಕ್ತಿಯಾಗಿ ಬಸ್ರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಡಾ ವಿದ್ಯಾ ಏಡ್ಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನಕರ ಶೆಟ್ಟಿ ಜಾಗೃತಿ ಜಾಥಾ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಚಂದ್ರಾವತಿ ಶೆಟ್ಟಿ ವಹಿಸಿದ್ದರು.

ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ರಾಘವೇಂದ್ರ ಶೆಟ್ಟಿ ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ರಾಘವೇಂದ್ರ ಶೆಟ್ಟಿ ಎಸ್ ವಂದಿಸಿದರು. ಕನ್ನಡ ಉಪನ್ಯಾಸಕಿ ಮಮತಾ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here