ಗಂಗೊಳ್ಳಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಂತಿ ಖಾರ್ವಿ, ಉಪಾಧ್ಯಕ್ಷರಾಗಿ ತಬ್ರೇಜ್ ಆಯ್ಕೆ

0
202
oplus_2

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಗ್ರಾಮ ಪಂಚಾಯತಿಯ ಮೊದಲ ಅವಧಿಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ ಖಾರ್ವಿ ಮತ್ತು ಉಪಾಧ್ಯಕ್ಷರಾಗಿ ಎಸ್‍ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಆಯ್ಕೆಯಾಗಿದ್ದಾರೆ.

Click Here

ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಅ (ಮಹಿಳೆ)ಕ್ಕೆ ಮೀಸಲಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-6 ಕ್ಷೇತ್ರದಿಂದ ಗೆದ್ದ ಕಾಂಗ್ರೆಸ್ ಬೆಂಬಲಿತ ಜಯಂತಿ ಖಾರ್ವಿ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ರೇಖಾ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಗಂಗೊಳ್ಳಿ-2 ಕ್ಷೇತ್ರದಿಂದ ಗೆದ್ದ ಎಸ್‍ಡಿಪಿಐ ಬೆಂಬಲಿತ ತಬ್ರೇಜ್ ಮತ್ತು ಗಂಗೊಳ್ಳಿ-1 ಕ್ಷೇತ್ರದಿಂದ ಗೆದ್ದ ಬಿಜೆಪಿ ಬೆಂಬಲಿತ ನಾಗರಾಜ ಖಾರ್ವಿ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಂತಿ ಖಾರ್ವಿ 19 ಮತಗಳನ್ನು ಪಡೆದರೆ ರೇಖಾ ಖಾರ್ವಿ 13 ಮತಗಳನ್ನು ಪಡೆದರು. ಒಂದು ಮತ ಅಸಿಂಧುವಾಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತಬ್ರೇಜ್ 18 ಮತಗಳನ್ನು ಮತ್ತು ನಾಗರಾಜ ಖಾರ್ವಿ 15 ಮತಗಳನ್ನು ಪಡೆದುಕೊಂಡರು. ಬಿಜೆಪಿಯಿಂದ ಬಂಡಾಯವಾಗಿ ಸ್ಪರ್ಧಿಸಿ ಗೆದ್ದ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದರು.

ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಬೆಂಬಲಿತ ಸದಸ್ಯ ರಿಯಾಜ್ ಅಹಮ್ಮದ್ ಎಂಬುವರು ಅಂಬುಲೆನ್ಸ್‍ನಲ್ಲಿ ಬಂದು ಮತ ಚಲಾಯಿಸಿದರು.
ಕುಂದಾಪುರ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರು ಚುನಾವಣಾ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಪಿಡಿಒ ಉಮಾಶಂಕರ, ಗ್ರಾಮ ಪಂಚಾಯತ್‍ನ ನಾರಾಯಣ ಶ್ಯಾನುಭಾಗ್ ಹಾಗೂ ಸಿಬ್ಬಂದಿಗಳು ಸಹಕರಿಸಿದರು.
33 ಸದಸ್ಯ ಬಲದ ಗಂಗೊಳ್ಳಿ ಗ್ರಾಮ ಪಂಚಾಯತ್‍ನಲ್ಲಿ ಕಾಂಗ್ರೆಸ್ ಬೆಂಬಲಿತರು 12 ಸ್ಥಾನಗಳಲ್ಲಿ, ಎಸ್‍ಡಿಪಿಐ ಬೆಂಬಲಿತರು 7 ಸ್ಥಾನಗಳಲ್ಲಿ, ಬಿಜೆಪಿ ಬೆಂಬಲಿತರು 12 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಚುನಾವಣಾ ಪೂರ್ವದಲ್ಲಿ ಎಸ್‍ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ನಿರೀಕ್ಷೆಯಂತೆ ಉಪಾಧ್ಯಕ್ಷ ಸ್ಥಾನವನ್ನು ಎಸ್‍ಡಿಪಿಐಗೆ ಬಿಟ್ಟು ಕೊಟ್ಟಿತು.

Click Here

LEAVE A REPLY

Please enter your comment!
Please enter your name here