ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಕುಂಭಾಸಿ ಇಲ್ಲಿ ಶ್ರೀ ವಿನಾಯಕ ದೇವರ ರಥೋತ್ಸವ ಡಿ.7 ಮಂಗಳವಾರ ನಡೆಯಿತು.













ರಥೋತ್ಸವದ ಪ್ರಯುಕ್ತ ಅಷ್ಟೋತ್ತರ ಸಹಸ್ರ ನಾಳಿಕೇರ ಮಹಾಗಣಪತಿಯಾಗ ನಡೆಯಿತು. ರಥೋತ್ಸವದ ಪ್ರಯುಕ್ತ ದೇವಸ್ಥಾನದಲ್ಲಿ ಡಿ.4ರಿಂದ ಉತ್ಸವಾದಿಗಳು ಆರಂಭಗೊಂಡಿದ್ದವು. ರಥೋತ್ಸವದಂದು ವಿವಿಧ ಧಾರ್ಮಿಕ ವಿಧಿವಿಧಾನಗಳು ಸಂಪನ್ನಗೊಂಡವು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಹಸ್ರಾರು ಭಕ್ತಾದಿಗಳು ವಿನಾಯಕ ದೇವರು ರಥರೂಢನಾಗಿ ವಿರಾಜಮಾನವಾಗುವ ದೃಶ್ಯ ಕಣ್ತುಂಬಿಕೊಂಡರು.
ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ, ಅನುವಂಶಿಕ ಪರ್ಯಾಯ ಅರ್ಚಕರಾದ ಕೆ.ವೆಂಕಟರಮಣ ಉಪಾಧ್ಯಾಯ ಮತ್ತು ಸಹೋದರರು, ಅನುವಂಶಿಕ ಧರ್ಮದರ್ಶಿಗಳಾದ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಕೆ.ವಿಠಲ ಉಪಾಧ್ಯಾಯ ಉಪಸ್ಥಿತರಿದ್ದರು.











