ಶಂಕರನಾರಾಯಣ : 1448 ನೇ ಮದ್ಯವರ್ಜನ ಶಿಬಿರ ಸಮಾರೋಪ.

0
693

Click Here

Click Here

ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ:
ಬದಲಾವಣೆ ಜಗದ ನಿಯಮ ಎನ್ನುವಂತೆ ಜೀವನದಲ್ಲಿ ‌ಬದಲಾವಣೆ ಕಂಡುಕೋಳ್ಳದ್ದಿದರೆ ನಮ್ಮ ಬದುಕಿಗೆ ಅರ್ಥವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್. ಹೆಚ್. ಮಂಜುನಾಥ ಹೇಳಿದರು.

Click Here


ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸುಬ್ರಹ್ಮಣ್ಯ ಜೋಯಿಸಿ ಸುವರ್ಣ ಸಭಾಭವನದಲ್ಲಿ ಗುರುವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ (ರಿ.) ನ ಕುಂದಾಪುರ ತಾಲ್ಲೂಕು ಘಟಕ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ.), ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನೆ ಕೇಂದ್ರ, ಬೆಂಗಳೂರಿನ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಶಂಕರನಾರಾಯಣ ಪ್ರಾಥಮಿಕ‌ ಆರೋಗ್ಯ ಕೇಂದ್ರ, ಶಂಕರನಾರಾಯಣ ಪೊಲೀಸ್ ಠಾಣೆ, ಅಂಪಾರು ವಲಯ ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ, ಶಂಕರನಾರಾಯಣ ಗ್ರಾಮ ಪಂಚಾಯತಿ, ಅಂಪಾರು ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು, ನವಜೀವನ ಸಮಿತಿ ಅಂಪಾರು ವಲಯ ಹಾಗೂ ಸ್ಥಳೀಯ ಸಂಘಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ 1488ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಮದ್ಯಪಾನ ಮಹಾಪಾಪ ಮಾತ್ರವಲ್ಲ ಶಾಪವೂ ಆಗಿದೆ. ಮದ್ಯಪಾನ ನಮ್ಮ ಸಂಬಂಧ, ಅಂತಸ್ತು ಹಾಗೂ‌ ಆರೋಗ್ಯವನ್ನು ಹಾಳುಮಾಡುತ್ತದೆ. ಜೀವನದಲ್ಲಿ ಬದಲಾವಣೆಗೆ ದೊರಕಿರುವ ಅವಕಾಶವನ್ನು ಸದುಪಯೋಗಿಸಿಕೊಳ್ಳಬೇಕು.ಮದ್ಯ ವ್ಯಸನಿಗಳನ್ನು, ಸಮಾಜ ಮತ್ತು ಕುಟುಂಬವೂ ಒಪ್ಪುವುದಿಲ್ಲ. ಸಮಾಜದಲ್ಲಿ ಸುಖವಿರಬೇಕು ಹಾಗೂ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿಯ ಕನಸು ನನಸಾಗಬೇಕು ಎಂದು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರಗಳನ್ನು ಸಂಘಟಿಸಿ ಅಂದಾಜು ಒಂದು ಲಕ್ಷಕ್ಕೂ ಹೆಚ್ಚು ಮದ್ಯ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿಸಲಾಗಿದೆ.

ಉಡುಪಿಯ ಪ್ರಸಿದ್ಧ ಮನೋರೋಗ ತಜ್ಞ ಡಾ..ಪಿ.ವಿ.ಭಂಡಾರಿ ಮಾತನಾಡಿದರು.

ಅಂಪಾರ ವಲಯದ 1488 ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಉಮೇಶ್ ಶೆಟ್ಟಿ ಕಲ್ಗದ್ದೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮಿನ್, ಕುಂದಾಪುರ ತಾಲ್ಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನಚಂದ್ರ ಶೆಟ್ಟಿ ರಟ್ಟಾಡಿ, ಉದ್ಯಮಿಗಳಾದ ಅನಿಲ್ ಶೆಟ್ಟಿ ಕವಲಾಳಿ, ಉಪ್ಪುಂದ ಶರತ್ ಕುಮಾರ್ ಶೆಟ್ಟಿ, ಅಂಪಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಅಧ್ಯಕ್ಷೆ ಜ್ಯೋತಿ ವಿ, ಬಿಸಿ ಟ್ರಸ್ಟ್ ನ ಜಿಲ್ಲಾ‌ ಹಿರಿಯ ನಿರ್ದೇಶಕ ಗಣೇಶ್ ಬಿ, ಹಿರಿಯ ಯೋಜನಾಧಿಕಾರಿ ಮುರುಳೀಧರ ಕೆ.ಶೆಟ್ಟಿ ಹಾಗೂ ವಸಂತ್ ಸಾಲಿಯಾನ್ ಇದ್ದರು.

ಈ ಸಂದರ್ಭದಲ್ಲಿ ದಯಾನಂದ್ ರಾವ್ ಹಾಗೂ ಉಮೇಶ್ ಶೆಟ್ಟಿ ಕಲ್ಗದ್ದೆ ಇವರನ್ನು ವಿಶೇಷವಾಗಿ ಗೌರವಿಸಲಾಯಿತು

ಅಂಪಾರು ವಲಯ ಮದ್ಯ ವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಗೌರವಾಧ್ಯಕ್ಷ ದಯಾನಂದ ರಾವ್ ಸ್ವಾಗತಿಸಿದರು. ಯಾದವ್ ಆಚರ್ಯ ಪ್ರಾರ್ಥಿಸಿದರು. ಅಂಪಾರು ವಲಯದ ಮೇಲ್ವಿಚಾರಕಿ ಮಾಲತಿ ಪಿ.ನಾಯಕ್ ವಂದಿಸಿದರು.
ಚೇತನ್ ನಿರೂಪಿಸಿದರು.

Click Here

LEAVE A REPLY

Please enter your comment!
Please enter your name here