ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ಕ್ರೀಡಾ ಸಮಿತಿ, ಬಂಟರ ಸಂಘ ಬೆಂಗಳೂರು ಇವರು ಆಯೋಜಿಸಿದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಸ್ಮಾರಕ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆಯ ಪ್ರಯುಕ್ತ ಕೊಡ ಮಾಡುವ ಕ್ರೀಡಾ ಸಾಧನ ಪ್ರಶಸ್ತಿಯನ್ನು ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ತೃತೀಯ ಬಿಸಿಎ ವಿದ್ಯಾರ್ಥಿ ಸನಿತ್ ಎಸ್ ಶೆಟ್ಟಿ ಇವರಿಗೆ ನೀಡಿ ಗೌರವಿಸಲಾಗಿದೆ.
ಇವರು ರಾಷ್ಟ್ರೀಯ ಮಟ್ಟದಲ್ಲಿ ನಡೆಸಲಾಗುವ ಡೆಫ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕಳೆದ ಬಾರಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ಈ ಬಾರಿ ಒಡಿಸ್ಸಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಮಹತ್ತರದ ಪಾತ್ರ ವಹಿಸಿದ್ದರು. ಅಲ್ಲದೆ ಫೈನಲ್ ಪಂದ್ಯದ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು .
ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ದೈಹಿಕ ಶಿಕ್ಷಣ ನಿರ್ದೇಶಕರು, ಬೋಧಕ ಹಾಗು ಬೋಧಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.