ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೂತನ ಅಧ್ಯಕ್ಷರಗಿ ರಾಜೀವ ಎನ್ ಶ್ರೀಯಾನ್ ಗುಜ್ಜಾಡಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುಮತಿ ಬಿ ಮೊಗವೀರ ಆಯ್ಕೆಯಾಗಿದ್ದಾರೆ.
ಫೆ.5ರಂದು ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ, ರವೀಂದ್ರ ಜಿ. ಮೆಂಡನ್ ಗುಡ್ಡಮ್ಮಾಡಿ, ಶ್ಯಾಮಲ ಜಿ.ಚಂದನ್, ರಾಮ ಮೊಗವೀರ ಕೊಡ್ಲಾಡಿ, ರಾಮ ಮೊಗವೀರ ಬೈಂದೂರು, ವನಿತಾ ಎಸ್. ಮೊಗವೀರ ಕೊಟೇಶ್ವರ, ಸುಶೀಲ ಕೆ ಮೊಗವೀರ ಬೈಂದೂರು ಉಪಸ್ಥಿತರಿದ್ದರು.
ಚುನಾವಣಾಧಿಕಾರಿಯಾಗಿ ಸುಮಿತ್ರಾ ಕುಮಾರಿ ಎನ್.ಎಸ್ ಕರ್ತವ್ಯ ನಿರ್ವಹಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯ ಕುಮಾರ್ ಹಟ್ಟಿಯಂಗಡಿ ವಂದಿಸಿದರು.











