ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೈಲೂರು ಇಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ನೀಡಿದ ಬೆಂಚು ಮತ್ತು ಡೆಸ್ಕ ಹಸ್ತಾಂತರ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕಿನ ಯೋಜನಾಧಿಕಾರಿಗಳಾದ ಪಾರ್ವತಿಯವರು ಮಾತನಾಡುತ್ತ “ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜ್ಞಾನದೀಪ ಕಾರ್ಯಕ್ರಮದ ಅಡಿಯಲ್ಲಿ ಹೆಚ್ಚಿನ ನೆರವನ್ನು ಸರಕಾರಿ ಶಾಲೆಗಳಿಗೆ ನೀಡುತ್ತಿದೆ” ಎಂದು ಅಭಿಪ್ರಾಯ ಪಟ್ಟರು.
ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಮಂಜುನಾಥ ಮೊಗವೀರ ಇವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀ, ಸ್ಥಳೀಯ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಅಧ್ಯಕ್ಷರಾದ ಜೈವೀರ ಶೆಟ್ಟಿ ಮೂಡುಬೈಲೂರು, ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ಮಂಗಳ, ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳೀಯ ಪ್ರೇರಕಿ ಕಸ್ತೂರಿ, ಉಪಸ್ಥಿತರಿದ್ದರು.
ಸಹಶಿಕ್ಷಕ ಆನಂದ ಕುಲಾಲ ಸ್ವಾಗತಿಸಿ ಪ್ರಸ್ತಾವನೆಗೈದರು. ಮುಖ್ಯಶಿಕ್ಷಕಿ ಗಿರಿಜಾ ಡಿ ವಂದಿಸಿದರು. ಸಹಶಿಕ್ಷಕಿ ಸಂಧ್ಯಾ ಕೆ ಕಾರ್ಯಕ್ರಮ ನಿರೂಪಿಸಿದರು.











