ಕುಂದಾಪುರ ಮಿರರ್ ಸುದ್ದಿ…

ಕೋಟ: ಸಮಾಜದ ಜವಾಬ್ದಾರಿ ಅರಿತು ನಿರಂತರ ಸಾಮಾಜಿಕ ಕಾರ್ಯಕ್ರಮಗಳನ್ನು ನೀಡುವ ಪಂಚವರ್ಣ ಸಂಘಟನೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಕಾರ್ಯ ಪ್ರಶಂಸನೀಯ ಎಂದು ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಹೇಳಿದರು.
ಸಾಸ್ತಾನ ಚೆಲ್ಲೆಮಕ್ಕಿ ನಾಗದೇಗುಲದ ವರ್ಧಂತಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 241 ನೇ ಪರಿಸರಸ್ನೇಹಿ ಅಭಿಯಾನದ ಸಲುವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಶೌರ್ಯ ತಂಡದ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿ ಪರಿರಸರ ಸಂರಕ್ಷಿಸುವ ಹೊಣೆಗಾರಿಕೆ ಸಂಘಸಂಸ್ಥೆಗಳಿಗೆ ಸಿಮೀತವಾಗದೆ ಪ್ರತಿಯೊಬ್ಬರ ಮನೆ ಮನದಲ್ಲೂ ಕಾರ್ಯಾರಂಭಗೊಳ್ಳಬೇಕು ಎಂದು ಕರೆ ಇತ್ತರು.
ದೇಗುಲದ ಕಾರ್ಯಾಧ್ಯಕ್ಷ ದಿನಕರ್ ವಿ ರಾವ್, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಸೇರಿಗಾರ್, ಪಂಚವರ್ಣ ಯುವಕ ಮಂಡಲದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಉಪಾಧ್ಯಕ್ಷ ಸಂತೋಷ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಶೌರ್ಯ ತಂಡದ ಲಕ್ಷ್ಮೀಶ, ಧರ್ಮಸ್ಥಳ ಗ್ರಾ.ಯೋಜನೆ ಪಾಂಡೇಶ್ವರ ವಲಯದ ಸೇವಾ ಪ್ರತಿನಿಧಿ ಶೋಭಾ ಇವರುಗಳನ್ನು ಗೌರವಿಸಲಾಯಿತು.
ಧ.ಗ್ರಾ.ಯೋಜನೆಯ ಪಾಂಡೇಶ್ವರ ವಲಯದ ಮೇಲ್ವಿಚಾರಕಿ ಜಯಲಕ್ಷ್ಮೀ , ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ದೇಗುಲದ ಆಡಳಿತ ಮಂಡಳಿ ಮತ್ತಿತರರು ಉಪಸ್ಥಿತರಿದ್ದರು.
ದೇಗುಲದ ಆಡಳಿತ ಮಂಡಳಿಯ ಕಾರ್ಯದರ್ಶಿ ಚೆಲ್ಲೆಮಕ್ಕಿ ಗಣೇಶ್ ಜಿ ಸ್ವಾಗತಿಸಿ ಪ್ರಾಸ್ತಾವನೆ ಗೈದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರು. ಕಾರ್ಯಕ್ರಮವನ್ನು ಪತ್ರಕರ್ತ ರವೀಂದ್ರ ಕೋಟ ಸಂಯೋಜಿಸಿದರು.











