ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ, ಫೆ.14: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಇಲ್ಲಿನ ತಾಲೂಕು ಕಚೇರಿ ಎದುರು ಧರಣಿ ನಿರತ ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಮೊಳಹಳ್ಳಿ ದಿನೇಶ್ ಹೆಗ್ಡೆಯವರು, ಭೇಟಿ ನೀಡಿ ಮನವಿಯನ್ನು ಸ್ವೀಕರಿಸಿದರು.
ಗ್ರಾಮ ಲೆಕ್ಕಾಧಿಕಾರಿಗಳಿಗೆ ಮೂಲಭೂತ ಸೌಕರ್ಯ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರನ್ನು ಭೇಟಿ ನೀಡಿ ಚರ್ಚಿಸಿ ಶೀಘ್ರವಾಗಿ ನಿಮ್ಮ ಬೇಡಿಕೆ ಈಡೇರಿಸಲು ಪ್ರಯತ್ನಿಸುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ಟೊ, ಮಹಿಳಾ ಬ್ಲಾಕ್ ಅಧ್ಯಕ್ಷೆ ದೇವಕಿ ಸಣ್ಣಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರಿಗಾರ್, ಇಂಟೆಕ್ ಅಧ್ಯಕ್ಷ ಚಂದ್ರ ಆಮೀನ್, ಪುರಸಭಾ ಸದಸ್ಯರಾದ ಶ್ರೀಧರ್ ಶೇರಿಗಾರ್, ಅಶೋಕ್ ಸುವರ್ಣ, ತಾಲೂಕು ಗ್ಯಾರೆಂಟಿ ಸಮಿತಿಯ ಸದಸ್ಯರಾದ ಅಭಿಜಿತ್ ಪೂಜಾರಿ, ಪಂಚಾಯತ್ ಸದಸ್ಯರಾದ ರೋಷನ್ ಬರೆಟ್ಟೊ, ರಘುರಾಮ್ ನಾಯ್ಕ್ ಇನ್ನಿತರರು ಉಪಸ್ಥಿತರಿದ್ದರು.











