ಹೊಂಬೆಳಕು – 2025 ಕ್ರೀಡಾ-ಸಾಂಸ್ಕೃತಿಕ ಉತ್ಸವದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ ಒಟ್ಟು ನಾಲ್ಕು ಬಹುಮಾನ

0
229

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಅವಿಭಜಿತ ದ.ಕ ಜಿಲ್ಲೆಯ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಿಬ್ಬಂದಿಗಳ ಕ್ರೀಡಾಕೂಟವು ಫೆ.22ರಂದು ಸಹ್ಯಾದ್ರಿ ಕ್ರೀಡಾಂಗಣ ,ಅಡ್ಯಾರು ,ಮಂಗಳೂರು ಇಲ್ಲಿ ನಡೆಯಿತು.

Click Here

ಈ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಹಿಳೆಯರ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ, ಮಹಿಳೆಯರ ಹಗ್ಗ ಜಗ್ಗಾಟದಲ್ಲಿ ದ್ವಿತೀಯ ಸ್ಥಾನ , ಪುರುಷರ ಹಗ್ಗ ಜಗ್ಗಾಟದಲ್ಲಿ ತೃತೀಯ ಸ್ಥಾನ, ಪಥಸಂಚಲನದಲ್ಲಿ ಐದನೇ ಸ್ಥಾನವನ್ನು ಪಡೆದು ಒಟ್ಟು ಸ್ತರಹದಲ್ಲಿ ಬಹುಮಾನವನ್ನು ಗೆದ್ದುಕೊಂಡು ಫಲಕದೊಂದಿಗೆ ಪ್ರಮಾಣಪತ್ರ ಹಾಗೂ ನಗದು ಬಹುಮಾನವನ್ನು ತನ್ನದಾಗಿಸಿಕೊಂಡಿತು.

ಬ್ರಹ್ಮಾವರ ತಾಲೂಕಿಗೆ ಪಥ ಸಂಚಲನದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿತು. ಪಟ್ಟಣ ಪಂಚಾಯತ್ ಅಧ್ಯಕ್ಷ ಸುಕನ್ಯಾ ಜೆ ಶೆಟ್ಟಿ ಹಾಗೂ ಉಪಾಧ್ಯಕ್ಷರಾದ ಶ್ರೀಮತಿ ಗಿರಿಜಾ ಪೂಜಾರಿ, ಮುಖ್ಯಾಧಿಕಾರಿ ಅಜೇಯ ಭಂಡಾರ್ಕರ್ , ಪಂಚಾಯತ್ ಸದಸ್ಯರು, ಸಿಬ್ಬಂದಿವರ್ಗ, ಪೌರಕಾರ್ಮಿಕರು ಉಪಸ್ಥಿತರಿದ್ದರು.

Click Here

LEAVE A REPLY

Please enter your comment!
Please enter your name here