ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯಿಂದ ಮೆಡಲ್ ಆಫ್ ಮೇರಿಟ್ ಸೇವಾ ಪದಕ ಮತ್ತು ಪ್ರಮಾಣ ಪತ್ರವನ್ನು ಬೆಂಗಳೂರಿನ ದಯಾನಂದ ಸಾಗರ್ ಆಡಿಟೋರಿಯಂ ನಡೆದ ಅಭಿನಂದನಾ ಸಮಾರಂಭದಲ್ಲಿ ಗುಣರತ್ನ ಇವರಿಗೆ ನೀಡಿ ಗೌರವಿಸಲಾಯಿತು.
ಪ್ರಸ್ತುತ ಇವರು ಭಾರತ್ ಸೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಉಡುಪಿ ಜಿಲ್ಲಾ ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲಾ ದಿನದಿಂದಲೇ ಭಾರತ್ ಸೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಸೇವಾ ಪದಕ ನೀಡಿ ಗೌರವಿಸಿದ್ದಾರೆ.











