ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ತಾಯಿಯ ಹೆಸರಿನ ಟ್ರಸ್ಟಿನಲ್ಲಿ ತನ್ನ ಹುಟ್ಟು ಹಬ್ಬವನ್ನು ಆಚರಿಸುತ್ತ ರಕ್ತದಾನದಂತಹ ಮಹತ್ಕಾರ್ಯಕ್ಕೆ ಕೈ ಹಾಕಿರುವುದು ಅತ್ಯಂತ ಶ್ರೇಷ್ಠ ಕಾರ್ಯಕ್ರಮ ಮತ್ತು ಸಮಾಜಕ್ಕೆ ಮಾದರಿಯಾದ ಒಂದು ಚಿಂತನೆ ಎಂದು ಸುಣ್ಣಾರಿ ಎಕ್ಸಲೆಂಟ್ ಪಿಯು ಕಾಲೇಜಿನ ಚೇರ್ಮನ್ ಎಂ. ಮಹೇಶ್ ಹೆಗ್ಡೆ ಹೇಳಿದರು.
ಅವರು ಬಿದ್ಕಲ್ಕಟ್ಟೆಯ ಕೆ. ಪಿ. ಎಸ್ ಪ್ರೌಢಶಾಲೆಯಲ್ಲಿ ಮೊಳಹಳ್ಳಿ ದಿನೇಶ್ ಹೆಗ್ಡೆ ಹುಟ್ಟು ಹಬ್ಬದ ಪ್ರಯುಕ್ತ ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ನ ಪ್ರವರ್ತಕರು ಮೊಳಹಳ್ಳಿ ದಿನೇಶ್ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಬ್ಬ ವ್ಯಕ್ತಿ ನೀಡುವ ರಕ್ತದಿಂದ ಮೂರು ವ್ಯಕ್ತಿಗಳ ಜೀವ ಉಳಿಸಬಹುದಾದರೆ ಅಂತಹ ರಕ್ತದಾನಕ್ಕಿಂತ ಶ್ರೇಷ್ಠವಾದ ದಾನ ಇನ್ನೊಂದಿಲ್ಲ ಎಂಬುದನ್ನು ಮನಗಂಡು ನನ್ನ ಹುಟ್ಟು ಹಬ್ಬದ ದಿನದಂದು ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇನೆ. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಮಾಡಬಹುದಾದ ಏಕೈಕ ದಾನ ಅಂದರೆ ಅದು ರಕ್ತದಾನ. ಸಮಾಜದ ಎಲ್ಲಾ ಯುವಕ ಯುವತಿಯರು ರಕ್ತದಾನ ಮಾಡುವ ಮೂಲಕ ಮನುಷ್ಯನ ಜೀವವನ್ನು ಕಾಪಾಡುವ ಪಣತೊಡಬೇಕಾಗಿದೆ ಎಂದರು. ಇದೇ ಸಂದರ್ಭ ಸ್ವತಃ ತಾವೇ ರಕ್ತದಾನ ಮಾಡಿದರು.
ಕುಂದಾಪುರ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಚೇರ್ಮನ ಜಯಕರ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆ ಮತ್ತು ರಕ್ತದಾನ ಮಹತ್ವ ವಿವರಿಸಿದರು.
ಮೊಳಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಉಡುಪಿ ಜಿಲ್ಲಾ ಲಯನ್ಸ್ ಕ್ಲಬ್ ಅಂಬಾಸಿಡರ್ ಅರುಣ್ ಕುಮಾರ್ ಹೆಗ್ಡೆ, ಕೆಪಿಎಸ್ ಬಿದ್ಕಲ್ ಕಟ್ಟೆ ಇದರ ಉಪ ಪ್ರಾಂಶುಪಾಲ ಕರುಣಾಕರ ಶೆಟ್ಟಿ, ಮೊಳಹಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಚೈತ್ರ ಅಡಪ, ರೆಡ್ ಕ್ರಾಸ್ ಸೆಕ್ರೆಟರಿ ಸತ್ಯನಾರಾಯಣ ಪುರಾಣಿಕ್, ಕಾರ್ಯದರ್ಶಿ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ನ ಪ್ರಾಜೆಕ್ಟ್ ಮ್ಯಾನೇಜರ್ ಗಿರೀಶ್ ಪ್ರಾಸ್ತಾವಿಸಿದರು. ಟ್ರಸ್ಟಿ ಸಂತೋಷ್ ಕಾಂಚನ್ ಕೆ.ಕೆ., ಕಾರ್ಯಕ್ರಮ ನಿರೂಪಿಸಿ, ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಪ್ರಾಸ್ತಾವಿಕ ಮಾತನಾಡಿದರು. ಮೊಳಹಳ್ಳಿ ಸ.ಹಿ. ಪ್ರಾ. ಶಾಲೆಯ ಪದವೀಧರ ಶಿಕ್ಷಕ ಆದರ್ಶ ಸ್ವಾಗತಿಸಿ, ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ ನ ಟ್ರಸ್ಟಿ ಗಣೇಶ್ ಎನ್ ವಂದಿಸಿದರು.

ಇದೇ ಸಂದರ್ಭ ಟ್ರಸ್ಟಿನ ಪ್ರವರ್ತಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ ಇವರ ಹುಟ್ಟು ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಲಾಯಿತು. ಈ ಸಂದರ್ಭ ದಿನೇಶ್ ಹೆಗ್ಡೆ ಮನೆಯವರು ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.











