ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ: ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಂಕರನಾರಾಯಣ ಭಟ್ ಕೊಂಡಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ.
ಎರಡನೇ ಅವಧಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಉಮೇಶ್ ಶೆಟ್ಟಿ ಕಲ್ಗದ್ದೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಶಂಕರನಾರಾಯಣ ಭಟ್ ಕೊಂಡಳ್ಳಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಬಂದಿತ್ತು.
ಚುನಾವಣಾಧಿಕಾರಿಯಾಗಿ ಯುವಜನ ಕ್ರೀಡಾ ಯೋಜನಾಧಿಕಾರಿ ಕುಸುಮಾಕರ ಶೆಟ್ಟಿ ಭಾಗವಹಿಸಿ, ಆಯ್ಕೆ ಪ್ರಕ್ರಿಯೆ ನೆಡೆಸಿಕೊಟ್ಟರು. ಈ ಸಂದರ್ಭದಲ್ಲಿ ಶಂಕರನಾರಾಯಣ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ವತ್ಸಲಾ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಭಿವೃದ್ಧಿ ಅಧಿಕಾರಿ ಶ್ವೇತ ಲತಾ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.











