ಅರ್ಹರಿಗೆ ದ್ವಿಚಕ್ರ ವಾಹನ ಹಸ್ತಾಂತರಿಸಿದ ಕುಂದಾಪುರ ಶಾಸಕ ಕೊಡ್ಗಿ
ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ :ವಿಶೇಷ ಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ, ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 10 ಜನ ಫಲಾನುಭವಿಗಳಿಗೆ ರಿಟ್ರೋಫಿಟೆಡ್ ಯಂತ್ರಚಾಲಿತ ದ್ವಿಚಕ್ರವಾಹನ ವಿತರಿಸುವ ಕಾರ್ಯಕ್ರಮ ಮಾ.8ರಂದು ಕುಂದಾಪುರ ವಿಕಲಚೇತನರ ಇಲಾಖೆಯ ಆವರಣದಲ್ಲಿ ಜರಗಿತು.
ಕುಂದಾಪುರ ವಿಧಾನಸಭಾ ಕ್ಷೇತ್ರ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನದ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ, ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ದೇವಕಿ ಸಣ್ಣಯ್ಯ ಮೊದಲಾದವರು ಉಪಸ್ಥಿತರಿದ್ದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನಾ ಸಹಾಯಕರಾದ ಶಿವಾಜಿ ಸ್ವಾಗತಿಸಿ, ವಂದಿಸಿದರು.











