ಕುಂದಾಪುರ ಮಿರರ್ ಸುದ್ದಿ…
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ ಗಿಳಿಯಾರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು,ಯಕ್ಷಸೌರಭ ಕಲಾರಂಗ ಕೋಟ,ಮಹಿಳಾ ಬಳಗ ಹಂದಟ್ಟು ಇವರುಗಳ ಸಂಯೋಜನೆಯಲ್ಲಿ ಲಕ್ಷ್ಮೀಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ,ಗೀತಾನಂದ ಫೌಂಡೇಶನ್ ಮಣೂರು,ಕೋಟ ಗ್ರಾಮಪಂಚಾಯತ್, ಕ್ಲಿನ್ ಕುಂದಾಪುರ ಪ್ರೊಜೆಕ್ಟ್ ,ಪರಿಸರಸ್ನೇಹಿ ಬಳಗ ಮಟ್ನಕಟ್ಟೆ ಕೆರ್ಗಾಲ್ ಉಪ್ಪುಂದ,ಕ್ಲಿನ್ ತ್ರಾಸಿ ಪ್ರೋಜೆಕ್ಟ್ ಮರವಂತೆ, ಸ್ವಚ್ಛತಾ ಮಾಸತಂಡ ಮರಂತೆ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಹಮ್ಮಿಕೊಂಡ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಕಾರ್ಯಕ್ರಮದಲ್ಲಿ ಸುರೇಂದ್ರ ಕೋಟ ನಿರ್ಮಾಣದ ಮನಸ್ಸು ಕಸ ಎಂಬ ಕಿರುಚಿತ್ರವನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಅನಾವರಣಗೊಳಿಸಿದರು.
ಪರಿಸರ ಉಳಿಸಿ ಆಂದೋಲನದ ಭಾಗವಾಗಿ ಪರಿಸರ ತಜ್ಞ ಡಾ.ಬಾಲಕೃಷ್ಣ ಮುದ್ದೋಡಿ, ಕೋಟದ ವಿವೇಕ ವಿದ್ಯಾಸಂಸ್ಥೆಯ ಪ್ರಾಂಶುಪಾಲ ಕೆ.ಜಗದೀಶ್ ನಾವಡ,ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ,ಕೋಟತಟ್ಟು ಪಂಚಾಯತ್ ಅಧ್ಯಕ್ಷೆ ಅಶ್ವಿನಿದಿನೇಶ್,ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ,ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಶ್ರೀಕಾಂತ್ ಶೆಣೈ,ಪಂಚವರ್ಣ ಯುವಕ ಮಂಡಲದ ಗೌರವಾಧ್ಯಕ್ಷ ಸತೀಶ್ ಹೆಚ್ ಕುಂದರ್,ಸಂಘದ ಅಧ್ಯಕ್ಷ ಅಮೃತ್ ಜೋಗಿ,ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ್ ಮತ್ತಿತರರು ಉಪಸ್ಥಿತರಿದ್ದರು.