ಬೈಂದೂರು :ಬಿಜೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಜಿಟಲ್ ಕ್ಲಾಸ್ ಉದ್ಘಾಟನೆ

0
614

Click Here

Click Here

ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ : ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ದತ್ತು ಸ್ವೀಕರಿಸಲ್ಪಟ್ಟಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಜೂರು ಇದರ ಡಿಜಿಟಲ್ ಕ್ಲಾಸ್ ಉದ್ಘಾಟನಾ ಸಮಾರಂಭ ಸೋಮವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.

Click Here

ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಡಿಜಿಟಲ್ ಕ್ಲಾಸ್ ಕಾರ್ಯಕ್ರಮ ಉದ್ಘಾಟಿಸಿದರು.

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಶಾಲೆಯ ಮಕ್ಕಳು ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮತ್ತು ಇತರೆ ಕೊಡುಗೆ ನೀಡುತ್ತಾ ಬರುತ್ತಿದ್ದೇವೆ.ಇಂದು ಬಿಜೂರು ಶಾಲೆಗೆ ಉನ್ನತ ಮಟ್ಟದ ಡಿಜಿಟಲ್ ಕ್ಲಾಸ್ ಕೊಡುಗೆ ನೀಡಿದ್ದೇವೆ.ವಿದ್ಯಾರ್ಥಿಗಳು ಡಿಜಿಟಲ್ ಕ್ಲಾಸ್ ಸದುಪಯೋಗಪಡಿಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗಳು ದೇಶದ ಹೆಮ್ಮೆಯ ಪ್ರಜೆಗಳಾಗಿ ಹೊರಬರಲಿ ಎಂದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಜೂರು ಮುಖ್ಯೋಪಾಧ್ಯಾಯ ಮಂಜುನಾಥ, ಗ್ರಾಮ ಪಂಚಾಯತ್ ಸದಸ್ಯರಾದ, ರಮೇಶ್ ದೇವಾಡಿಗ, ರಾಜೇಂದ್ರ ಬಿಜೂರು, ಖಂಬದಕೋಣೆ ಸಂದೀಪ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವೇಶ್ವರ ಅಡಿಗ,‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿಜೂರು ಎಸ್.ಡಿ.ಎಮ್.ಸಿ. ಅಧ್ಯಕ್ಷೆ ಶಾರದಾ ದೇವಾಡಿಗ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಂದೀಶ್ ದೇವಾಡಿಗ, ವರಲಕ್ಷ್ಮಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಬಿಜೂರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲೆಯ ಶಿಕ್ಷಕಿಯರಾದ ಕವಿತಾ ಸ್ವಾಗತಿಸಿದರು, ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಅಶ್ವಿನಿ ವಂದಿಸಿದರು.

Click Here

LEAVE A REPLY

Please enter your comment!
Please enter your name here