ಕುಂದಾಪುರ ಮಿರರ್ ಸುದ್ದಿ…
ಕುಂದಾಪುರ: ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಒಂದಾದ ತಾಲೂಕಿನ ಕಾಳಾವರ ಪ್ರೌಢಶಾಲೆ ಇನ್ನೊಮ್ಮೆ ಉತ್ತಮ ಸಾಧನೆ ಮಾಡಿದೆ. 2024-25 ನೆಯ ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ 37 ವಿದ್ಯಾರ್ಥಿಗಳಲ್ಲಿ 35 ವಿದ್ಯಾರ್ಥಿಗಳು ಉತ್ತಿರ್ಣರಾಗಿ ಶೇ. 95 ಫಲಿತಾಂಶ. 9 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. 618 ಅಂಕ ಗಳಿಸಿದ ನೂರ್ ಮಾಝಿನ್ ಹಾಗೂ 607 ಅಂಕ ಗಳಿಸಿದ ಆಶಿಶ್ ಶೆಟ್ಟಿ ಶಾಲೆಗೆ ಕೀರ್ತಿ ತಂದಿರುತ್ತಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಫಲಿತಾಂಶ ನೀಡಲು ಶ್ರಮಿಸಿದ ಶಿಕ್ಷಕ ವ್ರಂದಕ್ಕೆ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಹಾಗೂ ಮುಖ್ಯೋಪಾಧ್ಯಾಯಿನಿಯವರು ಅಭಿನಂದಿಸಿದ್ದಾರೆ.











