ಕುಂದಾಪುರ ಮಿರರ್ ಸುದ್ದಿ…

ಕುಂದಾಪುರ :ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ನಮ್ಮ ಸಂಸ್ಥೆಯು ರಾಜ್ಯಮಟ್ಟದಲ್ಲಿ 10ರೊಳಗಿನ 6 ರ್ಯಾಂಕ್ ಗಳನ್ನು ಪಡೆದು ಅಮೋಘ ಸಾಧನೆ ಮಾಡಿದೆ. ಪ್ರಾವ್ಯ ಪಿ. ಶೆಟ್ಟಿ 625ಕ್ಕೆ 623 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸಂಸ್ಥೆಯ ವಿದ್ಯಾರ್ಥಿ ಆಯುಷ್ ಯು ಶೆಟ್ಟಿ 625ಕ್ಕೆ 622 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 4ನೇ ರ್ಯಾಂಕ್ ಪಡೆದಿದ್ದಾನೆ. ಸಂಸ್ಥೆಯ ವಿದ್ಯಾರ್ಥಿನಿ ಅನುಶ್ರೀ 625ಕ್ಕೆ 620 ಅಂಕ ಗಳಿಸುವುದರ ಮೂಲಕ ರಾಜ್ಯಕ್ಕೆ 6ನೇ ರ್ಯಾಂಕ್ ಪಡೆದಿದ್ದಾಳೆ. ಅಪೇಕ್ಷಾ ಶೆಟ್ಟಿ 625ಕ್ಕೆ 619 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದಿದ್ದಾಳೆ. ಸುಖಿ ಎಸ್. ಶೆಟ್ಟಿ 625 ಕ್ಕೆ 618 ಅಂಕಗಳಿಸುವುದರ ಮೂಲಕ ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದಿದ್ದಾಳೆ. ದರ್ಶನ್ ಕೆ.ಯು. 625 ಕ್ಕೆ 616 ಅಂಕ ಪಡೆಯುವುದರ ಮೂಲಕ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾನೆ ಎಂದು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ.ರಮೇಶ ಶೆಟ್ಟಿ ತಿಳಿಸಿದ್ದಾರೆ.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 615ಕ್ಕೂ ಮೇಲ್ಪಟ್ಟು 8 ವಿದ್ಯಾರ್ಥಿಗಳು ಅಂಕ ಗಳಿಸಿದ್ದಾರೆ. ಒಂದು ಶಿಕ್ಷಣ ಸಂಸ್ಥೆಯಿಂದ 600 ಮೇಲ್ಪಟ್ಟು 15 ವಿದ್ಯಾರ್ಥಿಗಳು ಅಂಕ ಗಳಿಸಿರುವುದು ವಿಶೇಷ. 95%ಕ್ಕಿಂತ ಮೇಲೆ 21 ವಿದ್ಯಾರ್ಥಿಗಳು, 90%ಕ್ಕಿಂತ ಮೇಲೆ 45 ವಿದ್ಯಾರ್ಥಿಗಳು, 85%ಕ್ಕಿಂತ ಮೇಲೆ 62 ವಿದ್ಯಾರ್ಥಿಗಳು, 107 ವಿದ್ಯಾರ್ಥಿಗಳು ಅದ್ಬುತವಾದ ಸಾಧನೆ ಮಾಡಿದ್ದಾರೆ
ಕಳೆದ ಎರಡು ವರ್ಷಗಳಿಂದ ವಿದ್ಯಾರಣ್ಯ ಶಾಲೆಯನ್ನು ನಡೆಸುತ್ತಿದ್ದು, ರಾಜ್ಯದ 26 ಜಿಲ್ಲೆಗಳಿಂದ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿಯಲ್ಲಿ 620ಕ್ಕಿಂತ ಹೆಚ್ಚು ಅಂಕ ಗಳಿಸಿ ಇದೇ ಸಂಸ್ಥೆಯಲ್ಲಿ ಪಿಯು ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರೂ.50ಸಾವಿರ ನಗದು ಬಹುಮಾನ ನೀಡಲಾಗುವುದು ಎಂದರು.
ಈ ಸಾಲಿನ ಎಸ್.ಎಸ್.ಎಲ್.ಸಿ ಸಾಧನೆಯಲ್ಲಿ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶಿಕ್ಷಕರ ವೃಂದದ ಮಾರ್ಗದರ್ಶನವೂ ಇದೆ. ನಮ್ಮ ಸಂಸ್ಥೆ ಪ್ರವೇಶಾತಿಯಲ್ಲಿ ಮೆರಿಟ್ ಪರಿಗಣಿಸಿದೆ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗುತ್ತಿದೆ ಎಂದರು.
ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ತೇರ್ಗಡೆಯಾದ 107 ವಿದ್ಯಾರ್ಥಿಗಳಲ್ಲಿ ಸುಮಾರು 20 ವಿದ್ಯಾರ್ಥಿಗಳು ಮೆರಿಟ್ ಸ್ಟುಡೆಂಟ್ ಇರಬಹುದು. ಉಳಿದ ಎಲ್ಲರಿಗೂ ಶಿಕ್ಷಕವೃಂದ ನಿರಂತರ ಭೋದನೆ ಮಾಡಿ ಈ ಸಾಧನೆ ಮಾಡಲು ಸಾಧ್ಯವಾಗಿದೆ. ನಾವು ಎಸ್.ಎಸ್.ಎಲ್.ಸಿ ಗೆ ಕೂಡಾ ಪ್ರವೇಶಾತಿ ನೀಡಿದ್ದೇವೆ. ಪ್ರವೇಶ ಪರೀಕ್ಷೆಯಲ್ಲಿ 4-5 ಅಂಕ ಪಡೆದ ವಿದ್ಯಾರ್ಥಿಗಳಿಗೂ ಸೀಟು ನೀಡಿದ್ದೇವೆ. ಅವರಿಗೆ ನಿರಂತರ ಅಭ್ಯಾಸ ಮಾಡಿಸಿ ಇವತ್ತು ಈ ಸಾಧನೆ ಮಾಡಲು ಸಾಧ್ಯವಾಗಿದೆ. ಹಾಗಾಗಿ ಸಂಸ್ಥೆಯ ಎಲ್ಲ ಬೋದಕರು, ಬೋದಕೇತರ ಸಿಬ್ಬಂದಿಗಳನ್ನು ಅಭಿನಂದಿಸುತ್ತೇವೆ. ಹಾಗೆಯೇ ಪ್ರಾವ್ಯ ಪಿ. ಶೆಟ್ಟಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಈಕೆ ನಮ್ಮ ಹಾಸ್ಟೆಲ್ ಅಲ್ಲಿ ಇದ್ದುಕೊಂಡು ಅಭ್ಯಾಸ ಮಾಡಿ ಈ ಸಾಧನೆ ಮಾಡಿರುವುದು ವಿಶೇಷ ಎಂದರು.
ವಿದ್ಯಾರ್ಥಿನಿ ಪ್ರಾವ್ಯ ಪಿ. ಶೆಟ್ಟಿ ಮಾತನಾಡಿ, ನನ್ನ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕವೃಂದ ತುಂಬಾ ಪ್ರೋತ್ಸಾಹ ನೀಡಿದ್ದಾರೆ. ವಿಷಯವಾರು ಶಿಕ್ಷಕರು ಯಾವುದೇ ಸಂದರ್ಭದಲ್ಲೂ ನನ್ನ ಸಂದೇಹಗಳನ್ನು ಪರಿಹರಿಸುತ್ತಿದ್ದರು. ಹಾಸ್ಟೆಲ್ ಅಲ್ಲಿಯೂ ಕೂಡಾ ಅಲ್ಲಿನ ಶಿಕ್ಷಕರು ಉತ್ತಮ ಮಾರ್ಗದರ್ಶನ ಮಾಡುತ್ತಿದ್ದರು. ಪರೀಕ್ಷೆಯ ಸಂದರ್ಭದಲ್ಲಿ ನಮ್ಮ ಮೇಲೆ ಯಾವುದೇ ಒತ್ತಡ ಹೇರುತ್ತಿರಲಿಲ್ಲ. ಮುಂದೆ ನಾನು ಸುಜ್ಞಾನ್ ಪಿಯು ಕಾಲೇಜಿನಲ್ಲಿ ಪಿಯು ವ್ಯಾಸಂಗ ಮುಂದುವರಿಸುತ್ತೇನೆ. ವೈದ್ಯೆಯಾಗುವ ಕನಸು ಹೊತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಪ್ರದೀಪ್, ಸಂಸ್ಥೆಯ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಸಾಧಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.











